ಕರ್ನಾಟಕ

karnataka

ETV Bharat / state

ರೇಣುಕಾಸ್ವಾಮಿ ಕೊಲೆ ಕೇಸ್: ಅ.22ರಂದು ಹೈಕೋರ್ಟ್‌ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ

ಅಕ್ಟೋಬರ್ 22ರಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಹೈಕೋರ್ಟ್ ಒಪ್ಪಿಗೆ ನೀಡಿದೆ.

By ETV Bharat Karnataka Team

Published : 6 hours ago

ನಟ ದರ್ಶನ್, ಹೈಕೋರ್ಟ್
ನಟ ದರ್ಶನ್, ಹೈಕೋರ್ಟ್ (ETV Bharat)

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಅ.22ರಂದು ನಡೆಸುವುದಾಗಿ ಹೈಕೋರ್ಟ್ ಇಂದು ತಿಳಿಸಿದೆ.

ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ದರ್ಶನ್ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಬುಧವಾರ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಪೀಠದ ಮುಂದೆ ವಿಚಾರಣೆಗೆ ಪರಿಗಣಿಸಲು ಕೋರಿ ದರ್ಶನ್ ಪರ ವಕೀಲ ಎಸ್.ಸುನಿಲ್ ಕುಮಾರ್ ಮೆಮೊ ಸಲ್ಲಿಸಿದರು. ಆ ಮೊಮೊ ಆಧರಿಸಿ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ನಗರದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಅ.14ರಂದು ಆದೇಶಿಸಿತ್ತು.

ಇದರಿಂದ ಅ.15ರಂದು ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ ದರ್ಶನ್, ಪ್ರಕರಣದಲ್ಲಿ ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ತಡವಾಗಿ ದಾಖಲು ಮಾಡಿಕೊಳ್ಳಲಾಗಿದೆ. ಶವಪರೀಕ್ಷೆಯನ್ನೂ ಸಹ ವಿಳಂಬವಾಗಿ ಮಾಡಲಾಗಿದೆ. ಪ್ರತ್ಯಕ್ಷ ಸಾಕ್ಷಿದಾರರನ್ನು ತನಿಖಾಧಿಕಾರಿಗಳೇ ಸೃಷ್ಟಿಸಿದ್ದಾರೆ. ಪ್ರಕರಣದಲ್ಲಿ ಇತರೆ ಆರೋಪಿಗಳೊಂದಿಗೆ ಯಾವುದೇ ಒಳಸಂಚು ರೂಪಿಸಿಲ್ಲ. ತನಿಖೆ ಈಗಾಗಲೇ ಪೂರ್ಣಗೊಂಡಿದ್ದು, ಹೆಚ್ಚಿನ ತನಿಖೆ ಅಗತ್ಯವಿಲ್ಲ. ಹಾಗೆಯೇ, ತಾನು ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದು, ಅಗತ್ಯ ಚಿಕಿತ್ಸೆ ಪಡೆಯಲು ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ:ದರ್ಶನ್‌ಗೆ ವಿಶೇಷ ಸೌಲಭ್ಯ ನೀಡಿದ್ದ ಜೈಲು ಅಧೀಕ್ಷಕ ಮಲ್ಲಿಕಾರ್ಜುನ ಸ್ವಾಮಿ ಅಮಾನತು ಎತ್ತಿಹಿಡಿದ ಕೆಎಟಿ

ABOUT THE AUTHOR

...view details