ಕರ್ನಾಟಕ

karnataka

ETV Bharat / state

ಶಾಸಕ ಸ್ಥಾನದಿಂದ ಮುನಿರತ್ನ ಅಮಾನತು ಮಾಡಲು ಸಭಾಧ್ಯಕ್ಷರಿಗೆ ಸಚಿವ ಹೆಚ್.ಕೆ ಪಾಟೀಲ್ ಪತ್ರ - mla Muniratna case - MLA MUNIRATNA CASE

ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿದ್ದು, ಅವರನ್ನು ಶಾಸಕ ಸ್ಥಾನದಿಂದ ಅಮಾನತು ಮಾಡಬೇಕು ಎಂದು ಸಚಿವ ಹೆಚ್.ಕೆ ಪಾಟೀಲ್ ಅವರು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿದ್ದಾರೆ.

ಮುನಿರತ್ನ ಅಮಾನತಿಗೆ ಆಗ್ರಹ
ಮುನಿರತ್ನ ಅಮಾನತಿಗೆ ಆಗ್ರಹ (ETV Bharat)

By ETV Bharat Karnataka Team

Published : Sep 23, 2024, 9:24 PM IST

ಬೆಂಗಳೂರು:ವಿಧಾನಸಭೆ ಸದಸ್ಯತ್ವದಿಂದ ಕೆ.ಮುನಿರತ್ನ ಅವರನ್ನು ಅಮಾನತುಗೊಳಿಸಲು ಆಗ್ರಹಿಸಿ ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ ಅವರು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನೈತಿಕ ಅಧಃಪತನಕ್ಕೆ ಕಾರಣವಾದ ಅತ್ಯಂತ ಹೀನ, ಅಸಭ್ಯ ಭಾಷೆ ಬಳಸಿದ್ದು ಆಕೇಪಾರ್ಹ. ವಿಧಾನಸಭೆಯ ಸದಸ್ಯರಿಗೆ ನೈತಿಕ ಮೌಲ್ಯಗಳ ನಿಯಂತ್ರಣ ಹೇರುವ 'ನೀತಿ - ನಿರೂಪಣಾ ಸಮಿತಿ' (Ethics Committee of State Legislature)ಯನ್ನು ರಚಿಸುವ ಅವಶ್ಯಕತೆ ಇದೆ. ಸದನದ ಒಳಗೆ ಹಾಗೂ ಹೊರಗೆ ಅಸಭ್ಯವಾಗಿ ವರ್ತಿಸುವ ಸದಸ್ಯರ ವರ್ತನೆಯನ್ನು ನಿಯಂತ್ರಿಸುವ ನಿಯಮಗಳನ್ನು ತಕ್ಷಣ ರಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಂವಿಧಾನದತ್ತವಾಗಿ ಸಭಾಧ್ಯಕ್ಷರಿಗೆ ಪ್ರದತ್ತವಾಗಿರುವ ಪರಮಾಧಿಕಾರವನ್ನು ಚಲಾಯಿಸಿ ವಿಶೇಷ ಕ್ರಮ ಕೈಗೊಳ್ಳುವ ಮೂಲಕ ಶಾಸಕ ಕೆ.ಮುನಿರತ್ನ ಅವರನ್ನು ವಿಧಾನಸಭೆಯಿಂದ ಅಮಾನತುಗೊಳಿಸಬೇಕು. ನೀತಿ - ನಿರೂಪಣಾ ಸಮಿತಿ ರಚನೆ ಮಾಡಿ, ಅದರ ಮೂಲಕ ಅಸಭ್ಯವಾಗಿ ವರ್ತಿಸುವ ಸದಸ್ಯರ ವಿರುದ್ಧ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ಈ ಘಟನೆಯಿಂದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಮೌಲ್ಯಗಳಿಗೆ, ಸಂಪ್ರದಾಯಗಳಿಗೆ ತೀವ್ರವಾದ ಪೆಟ್ಟು ಬಿದ್ದಿದೆ. ಎಲ್ಲಕ್ಕಿಂತ ಹೆಚ್ಚಾಗಿ ಶಾಸನಸಭೆಯ ಘನತೆ, ಗೌರವಕ್ಕೆ ತೀವ್ರವಾದ ಧಕ್ಕೆಯುಂಟಾಗಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ:ಬಿಬಿಎಂಪಿ ವ್ಯಾಪ್ತಿಯಲ್ಲೂ ಇ - ಖಾತೆ ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ - e account Property registration

ABOUT THE AUTHOR

...view details