ಕರ್ನಾಟಕ

karnataka

ETV Bharat / state

ರಸ್ತೆ ಅಪಘಾತ ನಿಯಂತ್ರಣಕ್ಕೆ ಗೃಹ ಇಲಾಖೆಯಿಂದ ಸರ್ಕಾರಕ್ಕೆ ₹100 ಕೋಟಿ ಪ್ರಸ್ತಾವನೆ: ಪರಮೇಶ್ವರ್ - G Parameshwar - G PARAMESHWAR

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ಸಚಿವ ಜಿ. ಪರಮೇಶ್ವರ್‌
ಸಚಿವ ಜಿ. ಪರಮೇಶ್ವರ್‌ (ETV Bharat)

By ETV Bharat Karnataka Team

Published : Sep 9, 2024, 4:25 PM IST

Updated : Sep 9, 2024, 4:41 PM IST

ಸಚಿವ ಡಾ.ಜಿ.ಪರಮೇಶ್ವರ್‌ (ETV Bharat)

ತುಮಕೂರು:ಭಾನುವಾರ (ನಿನ್ನೆ) ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟ ಸ್ಥಳಕ್ಕೆ ಇಂದು ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿ ಹಿರಿಯ ಪೊಲೀಸ್‌ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಆಸ್ಪತ್ರೆಯ ಶವಾಗಾರಕ್ಕೆ ತೆರಳಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಪಘಾತಗಳು, ಪ್ರಾಣ ಕಳೆದುಕೊಂಡವರ ಸಂಖ್ಯೆ ಶೇ.50ರಷ್ಟು ಕಡಿಮೆಯಾಗಿದೆ. ರಸ್ತೆ ಅಪಘಾತಗಳ ಸಂಖ್ಯೆ ನಿಯಂತ್ರಿಸಲು ಕ್ರಮ ಕೈಗೊಳ್ಳಲು ಗೃಹ ಇಲಾಖೆಯಿಂದ ಸರ್ಕಾರಕ್ಕೆ 100 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಣಕಾಸು ಇಲಾಖೆಗೂ ಕಳುಹಿಸಿಕೊಡಲಾಗಿದೆ ಎಂದರು.

ರಾಜ್ಯದಲ್ಲಿ ಅಪಘಾತಗಳಿಂದ ಸಾವಿರಾರು ಮಂದಿ ಮೃತಪಟ್ಟಿದ್ದಾರೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಸ್ತೆ ಅಪಘಾತ ನಿಯಂತ್ರಿಸಲು ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯೊಂದಿಗೆ ಚರ್ಚಿಸಲಾಗುತ್ತಿದೆ. ಎಲ್ಲೆಲ್ಲಿ ತಿರುವುಗಳಿವೆ ಅಲ್ಲಿ ಅಪಘಾತಗಳು ಸಂಭವಿಸದಂತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಮೈಸೂರು-ಬೆಂಗಳೂರು ರಸ್ತೆ ನಿರ್ಮಾಣದ ನಂತರ ಕೇವಲ 4 ತಿಂಗಳಲ್ಲೇ 100ಕ್ಕೂ ಹೆಚ್ಚು ಮಂದಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಸಂಬಂಧ ರಸ್ತೆ ಕಾಮಗಾರಿ ಮಾಡಿದವರನ್ನು ಕರೆಸಿ, ತಾಂತ್ರಿಕ ಪರಿಣತರೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗಿದೆ. ನಂತರ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ. ಚಾಲಕರಿಗೂ ಕೂಡ ತಿಳುವಳಿಕೆ ನೀಡಬೇಕಿದೆ. ಹೈ ಸ್ಪೀಡ್‌ ಚಾಲನೆ ಮಾಡಿದರೆ ಡ್ರೈವಿಂಗ್‌ ಲೈಸೆನ್ಸ್‌ ರದ್ದು ಮಾಡಲಾಗುತ್ತದೆ ಎಂದು ಎಚ್ಚರಿಕೆಯನ್ನು ಸಹ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ತುಮಕೂರು: ಖಾಸಗಿ ಬಸ್​ ಡಿಕ್ಕಿ ಹೊಡೆದು ತಾಯಿ-ಮಗಳು ಸಾವು - Mother Daughter Killed

Last Updated : Sep 9, 2024, 4:41 PM IST

ABOUT THE AUTHOR

...view details