ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಘಟಕದ ವತಿಯಿಂದ ಆರೋಗ್ಯ ನಿಗಾ ಸಹಾಯಕರ ಹುದ್ದೆಗಳ (ಹೋಮ್ ನರ್ಸಿಂಗ್) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ಅಥವಾ ಪಿಯುಸಿ ಉತ್ತೀರ್ಣ ಅಥವಾ ಮೇಲ್ಟಟ್ಟ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:18ರಿಂದ 30 ವರ್ಷ.
ತರಬೇತಿ:ಭಾರತ ಸರಕಾರದ ಕೌಶಲ್ಯಾಭಿವೃದ್ಧಿ ಮಂತ್ರಾಲಯದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದ ಮಾನ್ಯತೆ ಪಡೆದ ಪಠ್ಯಕ್ರಮದಲ್ಲಿ ತರಬೇತಿ ನೀಡಲಾಗುತ್ತದೆ. ಒಂದು ತಿಂಗಳ ತರಬೇತಿ ಅವಧಿಯಲ್ಲಿ ಊಟ, ವಸತಿ ಸೌಲಭ್ಯ ಒದಗಿಸಲಾಗುತ್ತದೆ. ಯಶಸ್ವಿಯಾಗಿ ತರಬೇತಿ ಪೂರೈಸಿದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಒದಗಿಸಲಾಗುತ್ತದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್‌ಕ್ರಾಸ್ ಭವನ, ಅಜ್ಜರಕಾಡು, ಉಡುಪಿ. ಮೊಬೈಲ್ ಸಂಖ್ಯೆ -8310311448 ಅಥವಾ 9741762007 ಅಥವಾ ಜಿಲ್ಲಾ ರೆಡ್‌ಕ್ರಾಸ್ ಕಚೇರಿಯ ದೂರವಾಣಿ ಸಂಖ್ಯೆ:0820–2532222 ಸಂಪರ್ಕಿಸಿ.
ಇದನ್ನೂ ಓದಿ: ಹೆಸ್ಕಾಂನಲ್ಲಿ 338 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ