ಕರ್ನಾಟಕ

karnataka

ETV Bharat / state

ರಾಯಬಾಗ: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿ 6 ಜನ ದುರ್ಮರಣ - ಬೈಕ್​ ಕಾರು ಅವಘಾತ

ರಾಯಬಾಗ ತಾಲೂಕಿನ ಮುಗಳಖೋಡ ಗ್ರಾಮದ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ಸಾವನ್ನಪ್ಪಿದ್ದಾರೆ.

ಭೀಕರ ರಸ್ತೆ ಅಪಘಾತ
ಭೀಕರ ರಸ್ತೆ ಅಪಘಾತ

By ETV Bharat Karnataka Team

Published : Feb 23, 2024, 8:06 PM IST

Updated : Feb 23, 2024, 11:03 PM IST

ಭೀಕರ ರಸ್ತೆ ಅಪಘಾತ

ಚಿಕ್ಕೋಡಿ (ಬೆಳಗಾವಿ): ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಗ್ರಾಮದ ಸಮೀಪದಲ್ಲಿ ಎರಡು ದ್ವಿಚಕ್ರ ವಾಹನ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಆರು ಜನ ಮೃತಪಟ್ಟಿರುವ ಘಟನೆ ನಡೆದಿದೆ. ಗ್ರಾಮದ ಹೊರವಲಯದ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ.

ವೇಗವಾಗಿ ಬಂದ ಕಾರು​, ಮುಂದೆ ಚಲಿಸುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದೆ. ಪರಿಣಾಮ ಚಾಲಕ ಸಹಿತ ಕಾರಿನಲ್ಲಿದ್ದ ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟರೆ, ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ಇಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಭೀಕರ ರಸ್ತೆ ಅಪಘಾತ

ಘಟನೆಯಲ್ಲಿ ಗೋಕಾಕ್ ತಾಲೂಕಿನ ಬಾಳಾನಂದ ಪರಸಪ್ಪ ಮಾಳಗಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ರಾಯಭಾಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. KA-03- AF-1009 ನಂಬರಿನ ಕಾರ ಅಪಘಾತಕ್ಕೆ ಒಳಗಾಗಿದ್ದು, ಅಪಘಾತ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಮೂಡಲಗಿ ತಾಲೂಕಿನ ಗುರ್ಲಾಪುರ ನಿವಾಸಿಗಳಾದ ಮಲ್ಲಿಕಾರ್ಜುನ ರಾಮಪ್ಪ ಮರಾಠೆ (16), ಆಕಾಶ್ ರಾಮಪ್ಪ ಮರಾಠೆ (14), ಲಕ್ಷ್ಮಿ ರಾಮಪ್ಪ ಮರಾಠೆ (19) ಮತ್ತು ರಾಯಭಾಗ ತಾಲೂಕಿನ ಏಕನಾಥ ಭೀಮಪ್ಪ ಪಡತರಿ (22) ಹಾಗೂ ಮುಗಳಖೋಡ ನಿವಾಸಿ ನಾಗಪ್ಪ ಲಕ್ಷ್ಮಣ್ ಯಾದನ್ನವರ್ (48) ಹಾಗೂ ಮೂಡಲಗಿ ತಾಲೂಕಿನ ದುರದುಂಡಿ ನಿವಾಸಿ ಹನುಮಂತ ಮಲ್ಲಪ್ಪ ಮಲ್ಯಾಗೋಳ (42) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿ ಮೃತಪಟ್ಟ ನಾಲ್ವರ ಪೈಕಿ ಮೂವರು ಒಂದೇ ಕುಟುಂಬದವರಾಗಿದ್ದಾರೆ. ಸ್ಥಳಕ್ಕೆ ಅಥಣಿ ಡಿವೈಎಸ್ಪಿ ಶ್ರೀಪಾದ ಜಲ್ದೆ ಹಾಗೂ ಸಿಪಿಐ ರವೀಂದ್ರ ನಾಯಕವಾಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾರುಗೇರಿ ಪೊಲೀಸ್​ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಭೀಕರ ರಸ್ತೆ ಅಪಘಾತ

ಇದನ್ನೂ ಓದಿ:ಬೆಳಗಾವಿಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಮೂವರು ಸಾವು

ಇದಕ್ಕೂ ಮುನ್ನ ಯರಗಟ್ಟಿ ತಾಲೂಕಿನ ಕುರಬಗಟ್ಟಿ ಕ್ರಾಸ್ ಬಳಿ ಸ್ವಿಫ್ಟ್ ಮತ್ತು ಅಲ್ಟೋ ಕಾರುಗಳ ನಡುವೆ ಅಪಘಾತ ಸಂಭವಿಸಿತ್ತು. ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಮತ್ತು ಮಗು ಸೇರಿ ಮೂವರು ಮೃತಪಟ್ಟ ಘಟನೆ ನಡೆದಿತ್ತು. ಮೂಡಲಗಿ ತಾಲೂಕಿನ ಪಡಗುಂದಿ ಗ್ರಾಮದ ಮುತ್ತು ನಾಯ್ಕ (08), ಗೋಪಾಲ ನಾಯ್ಕ (45), ಧಾರವಾಡ ಮೂಲದ ಅನ್ನಪೂರ್ಣ ಶಿರೋಳ(53) ಸ್ಥಳದಲ್ಲೇ ಮೃತಪಟ್ಟಿದ್ದರು. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಗುರುವಾರ ಖಾನಾಪುರ ತಾಲೂಕಿನ ಬೀಡಿ-ಮಂಗ್ಯಾನಟ್ಟಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದರು. ಎರಡು ದಿನದಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಒಟ್ಟು 15 ಜನ ಮೃತಪಟ್ಟಿದ್ದಾರೆ.

Last Updated : Feb 23, 2024, 11:03 PM IST

ABOUT THE AUTHOR

...view details