ಕರ್ನಾಟಕ

karnataka

ಹಾವೇರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: 13 ಜನರ ದಾರುಣ ಸಾವು - ROAD ACCIDENT IN HAVERI

By ETV Bharat Karnataka Team

Published : Jun 28, 2024, 6:53 AM IST

Updated : Jun 28, 2024, 8:20 AM IST

ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 13 ಜನ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

Horrible road accident in Haveri district
ಭೀಕರ ರಸ್ತೆ ಅಪಘಾತ (ETV Bharat)

ಹಾವೇರಿ:ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲ್ಲರ್ (ಟಿಟಿ) ಡಿಕ್ಕಿ ಹೊಡೆದ ಪರಿಣಾಮ 13 ಜನರು ಮೃತಪಟ್ಟ ದಾರುಣ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ‌ ನಡೆದಿದೆ. ಶುಕ್ರವಾರ ಬೆಳಗಿನ ಜಾವ ನಾಲ್ಕೂವರೆ ಗಂಟೆಗೆ ಈ ದುರ್ಘಟನೆ ನಡೆದಿದೆ.

ಪರಶುರಾಮ್ (45), ಭಾಗ್ಯ (40), ನಾಗೇಶ್ (50), ವಿಶಾಲಾಕ್ಷಿ (50), ಸುಭದ್ರಾ ಭಾಯಿ (65), ಪುಣ್ಯ (50), ಮಂಜುಳಾ ಭಾಯಿ (57), ಚಾಲಕ ಆದರ್ಶ್ (23), ಮಾನಸಾ (24), ರೂಪಾ (40), ಮಂಜುಳಾ (50), ಆರ್ಯ (4) ಮತ್ತು ನಂದನ್ (6) ಮೃತ ದುರ್ದೈವಿಗಳು.

ಟೆಂಪೋ ಟ್ರಾವೆಲ್​​ನಲ್ಲಿ ಪಯಣಿಸುತ್ತಿದ್ದ 17 ಜನರಲ್ಲಿ 11 ಜನ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಸಮೀಪದ ಎಮ್ಮಿಗಟ್ಟಿ ಗ್ರಾಮದ ಮೂರು ಕುಟುಂಬಕ್ಕೆ ಸೇರಿದವರು ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಓರ್ವ ಅಜ್ಜಿ ಮತ್ತು ಓರ್ವ ಯುವತಿ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಂಶುಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಂತಿದ್ದ ಲಾರಿಗೆ ವೇಗವಾಗಿ ಬಂದು ಗುದ್ದಿದ ಪರಿಣಾಮ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಭೀಕರ ಅಪಘಾತದಿಂದ ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿದ್ದವು. ಹರಸಾಹಸದ ಬಳಿಕ ಅಗ್ನಿಶಾಮಕ ಸಿಬ್ಬಂದಿಯು, ಪೊಲೀಸರು ಮತ್ತು ಸ್ಥಳೀಯರ ಸಹಾಯದಿಂದ ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆಯುತ್ತಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಇದನ್ನೂ ಓದಿ:ಎಕ್ಸಲ್​ ಕಟ್​ ಆಗಿ ಬಲಕ್ಕೆ ತಿರುಗಿದ ಓಮಿನಿಗೆ ಗುದ್ದಿದ ಕಾರು, ಭೀಕರ ದೃಶ್ಯ ಕ್ಯಾಮೆರಾದಲ್ಲಿ ಸೆರೆ! - Car Accident

Last Updated : Jun 28, 2024, 8:20 AM IST

ABOUT THE AUTHOR

...view details