ಚಿಕ್ಕಮಗಳೂರು:ಮನೆ ಮೇಲೆವಿದ್ಯುತ್ ತಂತಿ ಬಿದ್ಧ ಪರಿಣಾಮ ಬೆಂಕಿ ತಗುಲಿ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾದ ಘಟನೆ ಕಡೂರು ತಾಲೂಕಿನ ಬ್ಯಾಗಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜಮ್ಮ, ಚಂದ್ರಪ್ಪ ಎಂಬುವರ ಮನೆಗೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿವೆ. ವಿಷಯ ತಿಳಿದ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದಾಗ ರ್ದುಘಟನೆ ಸಂಭವಿಸಿದೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಮುಂದುವರಿಸಿದ್ದಾರೆ.
ಚಿಕ್ಕಮಗಳೂರು: ಮನೆ ಮೇಲೆ ವಿದ್ಯುತ್ ತಂತಿ ಬಿದ್ದು ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ - household items caught fire
ವಿದ್ಯುತ್ ತಂತಿ ಮನೆ ಮೇಲೆ ಬಿದ್ಧ ಪರಿಣಾಮ ಬೆಂಕಿ ತಗುಲಿ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಕಡೂರಿನಲ್ಲಿ ನಡೆದಿದೆ.
Published : Mar 19, 2024, 9:42 PM IST
ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಅಗ್ನಿ ಅವಘಡ(ವಿಜಯಪುರ): ಮತ್ತೊಂದೆಡೆ, ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಕಾರಣ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ನಗರದ ರಾಜಾಜಿನಗರದಲ್ಲಿ ನಡೆದಿದೆ. ಮಹಾದೇವ ದಿಂಡವಾರ ಎಂಬುವವರ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಮಹಾದೇವ, ಸಂಕೇತ, ಮಣಿಕಂಠ ಹಾಗೂ ರಾಮು ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಚಿಕಿತ್ಸೆಗೆ ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನೆಯಲ್ಲಿನ ಗ್ಯಾಸ್ ಸಿಲಿಂಡರ್ ಸೋರಿಕೆಯೇ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಈ ಅಗ್ನಿ ಅವಘಡದಿಂದಾಗಿ ಮನೆಯಲ್ಲಿನ ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಗೀಡಾಗಿವೆ. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಮಗಳ ಸಾವಿನಿಂದ ಕೋಪಗೊಂಡ ಪೋಷಕರಿಂದ ಮನೆಗೆ ಬೆಂಕಿ: ಅತ್ತೆ, ಮಾವ ಸುಟ್ಟು ಕರಕಲು