ಕರ್ನಾಟಕ

karnataka

ETV Bharat / state

ಬೆಂಗಳೂರು: ಇಬ್ಬರು ಮಕ್ಕಳನ್ನು ಹತ್ಯೆಗೈದು ಗೃಹಿಣಿ ಆತ್ಮಹತ್ಯೆಗೆ ಶರಣು

ತಾಯಿಯೊಬ್ಬಳು ತನ್ನಿಬ್ಬರ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ನಡೆದಿದೆ.

Kodigehalli police station
ಕೊಡಿಗೇಹಳ್ಳಿ ಪೊಲೀಸ್​ ಠಾಣೆ (ETV Bharat)

By ETV Bharat Karnataka Team

Published : 6 hours ago

ಬೆಂಗಳೂರು:ಕೌಟುಂಬಿಕ ಕಲಹದಿಂದಾಗಿ ಬೇಸತ್ತು ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿ ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ತಡರಾತ್ರಿ ನಡೆದಿದೆ.

ಮಗ ಶ್ರೇಯಾನ್ (6) ಹಾಗೂ ಮಗಳು ಚಾರ್ವಿ (1 ವರ್ಷ 9 ತಿಂಗಳು) ಹತ್ಯೆ ಮಾಡಿದ ಬಳಿಕ ತಾಯಿ ಕುಸುಮಾ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2015ರಲ್ಲಿ ವಿವಾಹವಾಗಿದ್ದ ಸುರೇಶ್ ಹಾಗೂ ಕುಸುಮಾ ದಂಪತಿ ಕೊಡಿಗೇಹಳ್ಳಿಯ ಬಾಲಾಜಿ ಲೇಔಟ್‌ನಲ್ಲಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮಕ್ಕಳೊಂದಿಗೆ ವಾಸವಿದ್ದರು. ಸುರೇಶ್ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದರು. ತಡರಾತ್ರಿ ಮನೆಯಲ್ಲಿದ್ದ ಕುಸುಮಾ "ನಮ್ಮ ಸಾವಿಗೆ ನಾವೇ ಕಾರಣ" ಎಂದು ಡೆತ್​ ನೋಟ್​ ಬರೆದಿಟ್ಟು, ಮಕ್ಕಳನ್ನು ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೌಟುಂಬಿಕ ಕಲಹದಿಂದ ಘಟನೆ ನಡೆದಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಘಟನಾ ಸ್ಥಳದಲ್ಲಿ ಡೆತ್​ ನೋಟ್​ ಸಹ ಸಿಕ್ಕಿದ್ದು, ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ವಿ. ಸಜೀತ್​ ತಿಳಿಸಿದ್ದಾರೆ.

ಇದನ್ನೂ ಓದಿ:ಟೆಕ್ಕಿ ಆತ್ಮಹತ್ಯೆ ಪ್ರಕರಣ: ಉತ್ತರ ಪ್ರದೇಶಕ್ಕೆ ತೆರಳಿದ ಬೆಂಗಳೂರು ಪೊಲೀಸರ ತಂಡ

ಆತ್ಮಹತ್ಯೆ ಪರಿಹಾರವಲ್ಲ;ಎಲ್ಲ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಆತ್ಮಹತ್ಯೆಯ ಆಲೋಚನೆಗಳನ್ನು ಹೊಂದಿದ್ದರೆ, ಅಥವಾ ಸ್ನೇಹಿತರ ಬಗ್ಗೆ ಚಿಂತೆ ಮಾಡುತ್ತಿದ್ದರೆ ಅಥವಾ ಭಾವನಾತ್ಮಕ ಬೆಂಬಲದ ಅಗತ್ಯವಿದ್ದರೆ, ಯಾರಾದರೂ ನಿಮ್ಮ ನೋವು ಕೇಳಲು ಇರುತ್ತಾರೆ. ಅದಕ್ಕಾಗಿ ಸ್ನೇಹ ಫೌಂಡೇಶನ್‌ಗೆ ಕರೆ ಮಾಡಿ - 04424640050 (24x7 ಲಭ್ಯವಿದೆ) ಅಥವಾ iCall, ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನ ಸಹಾಯವಾಣಿ - 9152987821, ಇದು ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 8 ರಿಂದ ರಾತ್ರಿ 10ರ ವರೆಗೆ ಲಭ್ಯವಿರುತ್ತದೆ).

ABOUT THE AUTHOR

...view details