ಹುಬ್ಬಳ್ಳಿ:'ಛೋಟಾ ಮುಂಬೈ' ಎಂದೇ ಪ್ರಸಿದ್ಧಿ ಪಡೆದಿರುವ ವಾಣಿಜ್ಯ ನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ದೇಶದಲ್ಲಿ ಐದನೇ ಸ್ಥಾನ ಸಿಕ್ಕಿದೆ. 1974ರಲ್ಲಿ ನಿರ್ಮಾಣವಾಗಿರುವ ಈ ನಿಲ್ದಾಣಕ್ಕೆ ಈಗ ಸುವರ್ಣ ಮಹೋತ್ಸವದ ಸಂಭ್ರಮ. ಈ ಮಧ್ಯೆ ಗ್ರಾಹಕರ ಸಂತೃಪ್ತಿ ಸಮೀಕ್ಷೆಯಲ್ಲಿ ದೇಶದಲ್ಲೇ ಟಾಪ್ 5ರಲ್ಲಿ ಸ್ಥಾನ ಪಡೆದಿದೆ. ಮಧ್ಯಮ ಗಾತ್ರದ ವಿಮಾನ ನಿಲ್ದಾಣಗಳ ವಿಭಾಗದಲ್ಲಿ ಗ್ರಾಹಕರಿಗೆ ನೀಡುತ್ತಿರುವ ಸೇವೆ ಹಾಗೂ ಸೌಲಭ್ಯಗಳನ್ನು ಪರಿಗಣಿಸಿ ಈ ಸಮೀಕ್ಷೆ ನಡೆಸಲಾಗಿತ್ತು.
ಕಳೆದೆರಡು ದಶಕಗಳಿಂದ ಅತ್ಯಾಧುನಿಕ ಸೌಲಭ್ಯಗಳಿಂದ ವಿಮಾನ ನಿಲ್ದಾಣ ಮೇಲ್ದರ್ಜೆಗೇರುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲಿ ದೊಡ್ಡ ಹಾಗೂ ಹೆಚ್ಚು ಪ್ರಯಾಣಿಕರಿಗೆ ಸೇವೆ ನೀಡುವ ವಿಮಾನ ನಿಲ್ದಾಣವಿದು. ದೇಶದ 58 ವಿಮಾನ ನಿಲ್ದಾಣಗಳ ಪೈಕಿ ಗ್ರಾಹಕರಿಗೆ ಅತ್ಯುತ್ತಮ ಸೇವೆ ಒದಗಿಸುವಲ್ಲಿ ಹುಬ್ಬಳ್ಳಿ ಏರ್ಪೋರ್ಟ್‌ಗೆ ಒಟ್ಟು 5 ಅಂಕಕ್ಕೆ 4.95ರಷ್ಟು ಅಂಕಗಳು ದೊರೆತಿವೆ. ಈ ಮನ್ನಣೆಗೆ ಕಾರಣರಾದ ನಿಲ್ದಾಣದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಇದನ್ನೂ ಓದಿ:ಹುಬ್ಬಳ್ಳಿ ಏರ್‌ಪೋರ್ಟ್ ರಾಜ್ಯದ ಮೊದಲ ಹಸಿರು ವಿಮಾನ ನಿಲ್ದಾಣ