ಕರ್ನಾಟಕ

karnataka

ETV Bharat / state

ಅಂಜಲಿ ಕೊಲೆ ಪ್ರಕರಣ: ಹುಬ್ಬಳ್ಳಿಯಲ್ಲಿ ಬೀಡುಬಿಟ್ಟ ಸಿಐಡಿ, ತನಿಖೆ ಚುರುಕು - Anjali Murder Probe

ಹುಬ್ಬಳ್ಳಿ ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಅಂಜಲಿ ಕೊಲೆ ಪ್ರಕರಣದ ಸಿಐಡಿ ತನಿಖೆ
ಅಂಜಲಿ ಕೊಲೆ ಪ್ರಕರಣದ ಸಿಐಡಿ ತನಿಖೆ (ETV Bharat)

By ETV Bharat Karnataka Team

Published : May 22, 2024, 7:02 AM IST

ಹುಬ್ಬಳ್ಳಿ:ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳು ಹುಬ್ಬಳ್ಳಿಯಲ್ಲಿ ಬೀಡುಬಿಟ್ಟಿದ್ದಾರೆ. ಎಸ್ಪಿ ವೆಂಕಟೇಶ್, ಡಿವೈಎಸ್ಪಿ ಉಮೇಶ್ ನೇತೃತ್ವದ ನಾಲ್ವರು ಅಧಿಕಾರಿಗಳು ಸ್ಥಳೀಯ ಪೊಲೀಸರಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದಿದ್ದಾರೆ.

ಇತ್ತೀಚಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಂಜಲಿ ಅಂಬಿಗೇರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಈ ವೇಳೆ, ಹತ್ಯೆ ಆರೋಪಿ ವಿಶ್ವನಾಥ ಅಲಿಯಾಸ್ ಗಿರೀಶ್ ಸಾವಂತ್​ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದರು.

ಪ್ರಕರಣದ ಹಿನ್ನೆಲೆ: ಮೇ 15ರಂದು ಪ್ರೀತಿ ನಿರಾಕರಿಸಿದ ಕಾರಣಕ್ಕೆ ಕೋಪಗೊಂಡ ವಿಶ್ವನಾಥ ಅಲಿಯಾಸ್​ ಗಿರೀಶ್ ಎಂಬಾತ ಅಂಜಲಿ ಅಂಬಿಗೇರ ಎಂಬ ಯುವತಿಯ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ.

ಇದನ್ನೂ ಓದಿ:ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಯುವತಿಯ ಮನೆಗೆ ನುಗ್ಗಿ ಹತ್ಯೆ - Girl Stabbed To Death

ABOUT THE AUTHOR

...view details