ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ: ಬ್ಯಾಂಕ್ ದರೋಡೆಗೆ ಯತ್ನಿಸಿದ 5 ಗಂಟೆಯೊಳಗೆ ಆರೋಪಿ ಬಂಧಿಸಿದ ಪೊಲೀಸರು - Accused arrested - ACCUSED ARRESTED

ದರೋಡೆಗೆ ಯತ್ನಿಸಿ, ಬ್ಯಾಂಕ್​ನಿಂದ ಪರಾರಿಯಾಗಿದ್ದ ಆರೋಪಿಯನ್ನು ಘಟನೆ ನಡೆದ 5 ಗಂಟೆಗಳೊಳಗೆ ಬಂಧಿಸುವಲ್ಲಿ ಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

Arrested accused and seized items
ಬಂಧಿತ ಆರೋಪಿ ಹಾಗೂ ವಶಪಡಿಸಿಕೊಂಡ ವಸ್ತುಗಳು (ETV Bharat)

By ETV Bharat Karnataka Team

Published : Sep 6, 2024, 3:41 PM IST

Updated : Sep 6, 2024, 4:02 PM IST

ಹುಬ್ಬಳ್ಳಿ:ಅಮರಗೋಳ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿದರೋಡೆಗೆ ಯತ್ನಿಸಿದ 5 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಎಪಿಎಂಸಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಗುರುವಾರ ಸಂಜೆ ಅಪರಿಚಿತ ವ್ಯಕ್ತಿಯೊಬ್ಬ ಯೂನಿಯನ್​ ಬ್ಯಾಂಕ್​ನಲ್ಲಿ ಹಣ ಸುಲಿಗೆ ಮಾಡುವ ಉದ್ದೇಶದಿಂದ ಮುಖಕ್ಕೆ ಮಾಸ್ಕ್​ ಹಾಕಿಕೊಂಡು ಚಾಕು ಹಿಡಿದು ಬಂದಿದ್ದ. ಬ್ಯಾಂಕ್​ ನೌಕರರೊಬ್ಬರ ಕುತ್ತಿಗೆಗೆ ಚಾಕು ಹಿಡಿದು 10 ಲಕ್ಷ ರೂ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದ. ಕ್ಯಾಶ್​ ಕೌಂಟರ್​ ಬಳಿ ನೌಕರನ ರಕ್ಷಣೆಗೆ ಬಂದವರನ್ನು ತಳ್ಳಿ ಆರೋಪಿ ಪಾರಾರಿಯಾಗಿದ್ದನು. ಈ ಕುರಿತು, ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಎಪಿಎಂಸಿ ಪೊಲೀಸ್ ಠಾಣೆಯ ಇನ್ಸ್​​ಪೆಕ್ಟರ್​​ ಸಮಿವುಲ್ಲಾ ಕೆ. ಹಾಗೂ ಸಿಬ್ಬಂದಿ ಒಳಗೊಂಡ ತಂಡ, ಬ್ಯಾಂಕ್ ಸಿಬ್ಬಂದಿ ಸಹಾಯದಿಂದ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಘಟನೆ ನಡೆದ 5 ಗಂಟೆಗಳೊಳಗೆ ಆರೋಪಿ ಗೋಪನಕೊಪ್ಪ ನಿವಾಸಿ ಮಂಜುನಾಥ್ ಹಬೀಬ್ (28) ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದರೋಡೆಗೆ ಬಳಸಿದ್ದ ಎರಡು ಚಾಕು, ಬ್ಯಾಗ್ ಅನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿ ಷೇರು ಮಾರುಕಟ್ಟೆಯಲ್ಲಿ ಹಣ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರಿಂದ ಈ ದರೋಡೆಗೆ ಯತ್ನಿಸಿದ ಬಗ್ಗೆ ವಿಚಾರಣೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ:ಹೆದ್ದಾರಿಯಲ್ಲಿ ದರೋಡೆ ಯತ್ನ: 56 ಪ್ರಕರಣಗಳ ರೌಡಿಶೀಟರ್ ಕಾಲಿಗೆ ಗುಂಡೇಟು - Rowdy sheeter Shot

Last Updated : Sep 6, 2024, 4:02 PM IST

ABOUT THE AUTHOR

...view details