ಹುಬ್ಬಳ್ಳಿ:"ಹೊಸವರ್ಷ ಆಚರಣೆ ವೇಳೆ ಅಕ್ರಮ ಚಟುವಟಿಕೆಗಳು ಹೆಚ್ಚಾಗಿರುತ್ತವೆ. ಬೇರೆ ಬೇರೆ ಊರುಗಳಿಂದ ಹುಬ್ಬಳ್ಳಿಗೆ ಬರುವವರ ಸಂಖ್ಯೆ ಕೂಡ ಹೆಚ್ಚಾಗಿರುತ್ತೆ. ಈ ಸಂದರ್ಭದಲ್ಲಿ ಅಪರಾಧ ಕೃತ್ಯಗಳು ನಡೆಯುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆ ಮಾದಕ ವಸ್ತುಗಳ ಪೆಡ್ಲರ್ ಪರೇಡ್ ನಡೆಸಲಾಗಿದೆ" ಎಂದು ಹುಬ್ಬಳ್ಳಿ -ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದರು.
ನಗರದ ಹಳೇ ಸಿಎಆರ್ ಮೈದಾನದಲ್ಲಿ ಡ್ರಗ್ ಪೆಡ್ಲರ್ ಪರೇಡ್ ನಡೆಸಿ ಪೆಡ್ಲರ್ಸ್ಗೆ ಖಡಕ್ ವಾರ್ನಿಂಗ್ ಕೊಟ್ಟ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, "ಹೊಸವರ್ಷಕ್ಕೆ ಹಲವು ಕಾರ್ಯಕ್ರಮಗಳು ನಡೆಯುತ್ತವೆ. ಈ ಸಂದರ್ಭದಲ್ಲಿ ಅಪರಾಧ ಕೃತ್ಯಗಳು ನಡೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 50 ಪೆಡ್ಲರ್ಗಳ ಮೇಲೆ ದೂರು ದಾಖಲಿಸಿಕೊಂಡಿದ್ದೇವೆ. 200ಕ್ಕೂ ಹೆಚ್ಚು ಪೆಡ್ಲರ್ಸ್ಗಳನ್ನು ವಶಕ್ಕೆ ಪಡೆದು ಎನ್ಡಿಪಿಎಸ್ ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗಿದೆ" ಎಂದರು.