ಹುಬ್ಬಳ್ಳಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಮತ್ತು ದ್ವೇಷ ಅಪರಾಧ ತಡೆಗಟ್ಟುವ ಸಲುವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧ ಅಧಿನಿಯಮ 1989 ಹಾಗೂ 2015 ಮತ್ತು ನಿಯಮಗಳು 1995 ಮತ್ತು ಪರಿಷ್ಕೃತ ನಿಯಮಗಳು 2016 ಅನ್ನು ಜಾರಿಗೆ ತರಲಾಗಿದೆ. ಇವುಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಹುಬ್ಬಳ್ಳಿ ಸಮಾಜ ಕಲ್ಯಾಣ ಇಲಾಖೆ ಮುಂದಾಗಿದೆ. ಇದಕ್ಕಾಗಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಸ್ವಯಂಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಸಲು ಮುಂದಾಗಿದ್ದು, ಆಸಕ್ತ ಸಂಘ ಮತ್ತು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಚ್ಛಿಸುವ ಸಂಘ-ಸಂಸ್ಥೆಗಳು ಸಮಾಜ ಕಲ್ಯಾಣ ಇಲಾಖೆ ಹುಬ್ಬಳ್ಳಿ ಕಾರ್ಯಾಲಯದಲ್ಲಿ ಅರ್ಜಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ದೃಢೀಕೃತ ದಾಖಲೆಗಳೊಂದಿಗೆ ಆಗಸ್ಟ್ 9ರೊಳಗೆ ಕಚೇರಿಗೆ ಸಲ್ಲಿಸಬೇಕು. ತಾಲೂಕಿನ ಎಲ್ಲ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಸ್ವಯಂಸೇವಾ ಸಂಸ್ಥೆಗಳು ಅಥವಾ ಸಂಘಗಳು ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.