ಕರ್ನಾಟಕ

karnataka

ETV Bharat / state

ಬನ್ನೇರುಘಟ್ಟ: ಗಂಡ-ಹೆಂಡತಿ ಶವ‌ ಕೊಳೆತ ಸ್ಥಿತಿಯಲ್ಲಿ ಪತ್ತೆ - Couple Death - COUPLE DEATH

ಬನ್ನೇರುಘಟ್ಟದಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿಯ ಶವ‌ಗಳು ಪತ್ತೆಯಾಗಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.

COUPLE DEATH
ಗಂಡ-ಹೆಂಡತಿ ಶವ‌ ಕೊಳೆತ ಸ್ಥಿತಿಯಲ್ಲಿ ಪತ್ತೆ (ETV Bharat)

By ETV Bharat Karnataka Team

Published : Jun 6, 2024, 9:30 PM IST

ಆನೇಕಲ್: ತಾಲೂಕಿನ ಬನ್ನೇರುಘಟ್ಟದ ಜನತಾ ಕಾಲೊನಿಯ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿಯ ಮೃತದೇಹಗಳು ಪತ್ತೆಯಾಗಿವೆ. ಪ್ರಭು(25) ಹಾಗೂ ಲಕ್ಕಮ್ಮ(30) ಎಂಬ ದಂಪತಿಯ ಶವಗಳೆಂದು ಪೊಲೀಸರು ಗುರುತಿಸಿದ್ದಾರೆ.

ಮೃತ ಪ್ರಭು ವೃತ್ತಿಯಲ್ಲಿ ಚಾಲಕನಾಗಿದ್ದರೆ, ಲಕ್ಕಮ್ಮ ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದರು. ವಿಶ್ವನಾಥ್ ಎಂಬವರ ಮನೆಯಲ್ಲಿ ಬಾಡಿಗೆ ಪಡೆದು ದಂಪತಿ ವಾಸ ಮಾಡುತ್ತಿದ್ದರು ಎಂದು ಮಾಹಿತಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಇಬ್ಬರೂ ಕಳೆದ ಮೂರ್ನಾಲ್ಕು ದಿನಗಳಿಂದ ಮನೆಯಿಂದ ಹೊರಗೆ ಕಾಣಿಸಿಕೊಂಡಿರಲಿಲ್ಲ. ಮಂಗಳವಾರ ಮನೆಯ ಬಳಿ ಕೆಟ್ಟ ವಾಸನೆ ಬರುತ್ತಿದೆ ಎಂದು ಸ್ಥಳೀಯರು ನೀಡಿದ ದೂರಿನನ್ವಯ ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳ ಜೊತೆ ಬನ್ನೇರುಘಟ್ಟ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿ ಬಂದ ನಂತರ ತನಿಖೆ ಕೈಗೊಂಡು ಸಾವಿನ ಹಿಂದಿನ ನಿಖರ ಕಾರಣ ಹೊರಬೀಳಲಿದೆ ಎಂದು ಬನ್ನೇರುಘಟ್ಟ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ; ಗಂಡನ ಮನೆಯವರ ವಿರುದ್ಧ ಪ್ರಕರಣ - Housewife Suicide

ABOUT THE AUTHOR

...view details