ಕೊಪ್ಪಳ: ವ್ಯಕ್ತಿಯೊಬ್ಬ ಪತ್ನಿಯನ್ನು ಹೊಡೆದು ಕೊಲೆ ಮಾಡಿ ನಂತರ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪಳ ತಾಲೂಕಿನ ಬುಡಶೆಟ್ನಾಳ ಗ್ರಾಮದಲ್ಲಿ ಜರುಗಿದೆ. ಬುಡಶೆಟ್ನಾಳ ಗ್ರಾಮದ ನಿಂಗಪ್ಪ(45) ಆತ್ಮಹತ್ಯೆ ಮಾಡಿಕೊಂಡವರು. ಆತನ ಪತ್ನಿ ಲಕ್ಷ್ಮವ್ವ (40) ಗಂಡನಿಂದ ಕೊಲೆಯಾಗಿರುವವರು.
ಕೊಪ್ಪಳ: ಪತ್ನಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಪತಿ - Koppala Crime Case - KOPPALA CRIME CASE
ಕೊಪ್ಪಳ ತಾಲೂಕಿನ ಬುಡಶೆಟ್ನಾಳ ಗ್ರಾಮದಲ್ಲಿ ಪತ್ನಿ ಕೊಲೆ ಮಾಡಿದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
Published : Apr 11, 2024, 9:34 AM IST
ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಸ್ಥಳಕ್ಕೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಂತರ ಪ್ರಕರಣದ ಬಗ್ಗೆ ಪ್ರತ್ರಿಕ್ರಿಯಿಸಿದ ಅವರು, ಬುಡಶೆಟ್ನಾಳ ಗ್ರಾಮದಲ್ಲಿ ನಿನ್ನೆ ರಾತ್ರಿ ಮಹಿಳೆಯೊಬ್ಬರ ಕೊಲೆಯಾದ ಬಗ್ಗೆ ದೂರು ಬಂದಿತ್ತು. ಗಂಡ ಹೆಂಡತಿ ದುಡ್ಡಿನ ವಿಷಯಕ್ಕೆ ಜಗಳ ಮಾಡಿಕೊಂಡಿದ್ದಾರೆ. ಗಂಡ ಕುಡಿದ ಮತ್ತಿನಲ್ಲಿ ಹೆಂಡತಿ ತಲೆಗೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ನಂತರ ತಾನೂ ಆತ್ಮ ಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ. ಮಂಗಳವಾರ ರಾತ್ರಿ ನಡೆದಿರುವ ಘಟನೆಯಿದು.
ಇದನ್ನೂ ಓದಿ:ಫ್ಯಾಕ್ಟರಿ ನೀಡಿದ ಎಳನೀರು ಸೇವಿಸಿದ ಬಳಿಕ ಹಲವರು ಅಸ್ವಸ್ಥ: ಆಸ್ಪತ್ರೆಗೆ ದಾಖಲು - Tender Coconut