ಕರ್ನಾಟಕ

karnataka

ETV Bharat / state

ಕೌಟುಂಬಿಕ ಕಲಹ: ಪತ್ನಿಗೆ ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ! - Husband Killed His Wife - HUSBAND KILLED HIS WIFE

ಬೇಲೂರು ತಾಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಪತಿ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

HUSBAND KILLED HIS WIFE
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : Jun 18, 2024, 10:22 AM IST

ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಗೆ ಗುಂಡಿಕ್ಕಿ ಕೊಂದು ಬಳಿಕ ಪತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ನಡೆದಿದೆ. ಜಾಜಿ (45) ಕೊಲೆಯಾದ ಪತ್ನಿ, ಹರೀಶ್ (50) ಕೊಲೆ ಬಳಿಕ ಆತ್ಮಹತ್ಯೆ ಮಾಡಿಕೊಂಡ ಪತಿ.

ಪ್ರತಿದಿನ ಕ್ಷುಲ್ಲಕ ಕಾರಣಕ್ಕೆ ಜಗಳವಾಡುತ್ತಿದ್ದ ದಂಪತಿ, ಜೂ.17ರ ರಾತ್ರಿಯೂ ಗಲಾಟೆ ಮಾಡಿಕೊಂಡಿರುವ ಮಾಹಿತಿ ಇದೆ. ಇದು ವಿಕೋಪಕ್ಕೆ ತಿರುಗಿದ್ದರಿಂದ ಮನೆಯಲ್ಲಿದ್ದ ಬಂದೂಕಿನಿಂದ ಹರೀಶ್ ತನ್ನ ಪತ್ನಿ ಜಾಜಿಗೆ ಗುಂಡಿಕ್ಕಿದ್ದಾನೆ. ಬಳಿಕ ತಾನು ನೇಣಿಗೆ ಶರಣಾಗಿರುವ ಮಾಹಿತಿ ಲಭ್ಯವಾಗಿರುವುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ಗುಟ್ಕಾ ತಂದುಕೊಡದ ಕಾರಣಕ್ಕೆ ಬಾಲಕಿಯ ಕೊಲೆ; ಆರೋಪಿ ಬಂಧನ - KOPPAL CRIME

ABOUT THE AUTHOR

...view details