ದಾವಣಗೆರೆ:ಮದ್ಯಪಾನಕ್ಕೆ ಹಣ ನೀಡದ ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗುಡ್ಡದ ಕೊಮರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆರೋಪಿ ಪತಿ ಕದರಪ್ಪ (60) ಪರಾರಿಯಾಗಿದ್ದಾನೆ. ಸಾಕಮ್ಮ (55) ಹಲ್ಲೆಗೊಳಗಾದವರು.
ಕದರಪ್ಪ ಮತ್ತು ಸಾಕಮ್ಮ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಇದ್ದಲ ನಾಗೇನಹಳ್ಳಿ ಗ್ರಾಮದ ನಿವಾಸಿಗಳು. ಕುಡಿತದ ಚಟಕ್ಕೆ ದಾಸನಾಗಿದ್ದ ಕದರಪ್ಪ ಹಣ ನೀಡುವಂತೆ ಪತ್ನಿಗೆ ಪೀಡಿಸಿದ್ದಾನೆ. ಆಕೆ ಹಣ ನೀಡಲು ನಿರಾಕರಿಸಿದಳು ಎಂಬ ಕಾರಣಕ್ಕೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಹಲ್ಲೆ ಮಾಡಿದ್ದಾನೆ.