ಕರ್ನಾಟಕ

karnataka

ETV Bharat / state

ಮಂಗಳೂರು: ಹೈಡ್ರಾಲಿಕ್ ಅನಿಲ ಸೋರಿಕೆ, ನಿರಂತರ ಕಾರ್ಯಾಚರಣೆ ಮೂಲಕ ಬೇರೆ ಟ್ಯಾಂಕರ್​ಗೆ ಅನಿಲ ವರ್ಗಾವಣೆ - HYDRAULIC GAS LEAKAGE

ಕೋಟೆಕಾರ್ ಉಚ್ಚಿಲ ಸಮೀಪ ಟ್ಯಾಂಕರ್​ನಿಂದ ಹೈಡ್ರೋಕ್ಲೋರಿಕ್ ಅನಿಲ ಸೋರಿಕೆಯಾಗಿದೆ. ತಕ್ಷಣವೇ ಕಾರ್ಯಾಚರಣೆ ಕೈಗೊಂಡು, ಬೇರೆ ಟ್ಯಾಂಕರ್​ಗೆ ಅನಿಲ ವರ್ಗಾಯಿಸಲಾಗುತ್ತಿದೆ.

ಮಂಗಳೂರು: ಹೈಡ್ರಾಲಿಕ್ ಅನಿಲ ಸೋರಿಕೆ
ಮಂಗಳೂರು: ಹೈಡ್ರಾಲಿಕ್ ಅನಿಲ ಸೋರಿಕೆ (ETV Bharat)

By ETV Bharat Karnataka Team

Published : Dec 9, 2024, 8:25 PM IST

Updated : Dec 9, 2024, 9:33 PM IST

ಮಂಗಳೂರು: ಕಾರವಾರದಿಂದ ಕೊಚ್ಚಿಯತ್ತ ಹೈಡ್ರೋಕ್ಲೋರಿಕ್ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ವಾಹನದಲ್ಲಿ ಕೋಟೆಕಾರ್ ಉಚ್ಚಿಲ ಸಮೀಪ ಸೋರಿಕೆ ಉಂಟಾಗಿತ್ತು. ಬಳಿಕ ಜಿಲ್ಲಾಡಳಿತ ಹಾಗೂ ತಹಶೀಲ್ದಾರ್ ಅವರ ಸೂಚನೆ ಮೇರೆಗೆ ಅಗ್ನಿಶಾಮಕ ದಳ, ರಾಜ್ಯ ವಿಪತ್ತು ಪಡೆ (ಎಸ್‌ಡಿಆರ್‌ಎಫ್) ಹಾಗೂ ಬಿಎಎಸ್​​ಎಫ್ ತಂಡ ನಿರಂತರ ಕಾರ್ಯಾಚರಣೆ ನಡೆಸುವ ಮೂಲಕ ಟ್ಯಾಂಕರಿನಲ್ಲಿದ್ದ 33,000 ಲೀಟರ್ (ಐಬಿಸಿ) ಅನ್ನು ಬೇರೆ ಟ್ಯಾಂಕರ್‌ಗೆ ವರ್ಗಾಯಿಸುವ ಕಾರ್ಯ ನಡೆಯುತ್ತಿದೆ.

ಸೋಮವಾರ ಮಧ್ಯಾಹ್ನ 12.30 ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೇರಳದ ಕೊಚ್ಚಿಯತ್ತ ತೆರಳುತ್ತಿದ್ದ ಟ್ಯಾಂಕರಿನಲ್ಲಿ ಸೋರಿಕೆ ಆರಂಭವಾಗಿದೆ. ಕೋಟೆಕಾರು ಉಚ್ಚಿಲ ಸಮೀಪ ಟ್ಯಾಂಕರ್ ಚಾಲಕ ಬೇರೆ ವಾಹನದ ಚಾಲಕರ ಸೂಚನೆ ಮೇರೆಗೆ ಟ್ಯಾಂಕರ್ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಟ್ಯಾಂಕರಿನೊಳಗಿದ್ದ ಹೈಡ್ರೋಕ್ಲೋರಿಕ್ ಅನಿಲ ಸೋರಿಕೆಯಾಗುವುದನ್ನು ಗಮನಿಸಿ, ಸ್ಥಳೀಯ ಉಳ್ಳಾಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.

ಮಂಗಳೂರು: ಹೈಡ್ರಾಲಿಕ್ ಅನಿಲ ಸೋರಿಕೆ (ETV Bharat)

ಘಟನಾ ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ಮತ್ತು ಉಳ್ಳಾಲ ಠಾಣೆಯ ಪೊಲೀಸರು ಆಗಮಿಸಿ ಅಗ್ನಿ ಶಾಮಕ ದಳ ಠಾಣೆಗೆ ಮಾಹಿತಿ ನೀಡಿದ್ದಾರೆ. ನಿರಂತರವಾಗಿ ಸೋರಿಕೆ ಆಗುತ್ತಿರುವುದಕ್ಕೆ ಎಂಸೀಲ್ ಹಾಕಿ ಅನಿಲವನ್ನು ತಡೆಯುವ ಪ್ರಯತ್ನ ನಡೆಯಿತು‌. ಆದರೆ ಅದು ಯಶಸ್ವಿಯಾಗಲಿಲ್ಲ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸೋರಿಕೆ ಉಂಟಾಗುತ್ತಲೇ ಇತ್ತು.

ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪುಟ್ಟರಾಜು, ಕೋಟೆಕಾರು ಗ್ರಾಮ ಲೆಕ್ಕಾಧಿಕಾರಿ ನಯನಾ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಅಪಾಯದ ಮುನ್ಸೂಚನೆ ಅರಿತು ಜಿಲ್ಲಾಡಳಿತಕ್ಕೆ ಮಾಹಿತಿ ರವಾನಿಸಿದ್ದಾರೆ. ಬಳಿಕ ರಾಸಾಯನಿಕ ಅವಘಡಗಳಿಗೆ ಸಂಬಂಧಿಸಿದ ತುರ್ತು ಕಾರ್ಯಾಚರಣೆ ಕೈಗೊಳ್ಳುವ ಎಂಸಿಎಫ್, ಬಿಎಎಸ್​ಎಫ್ ಹಾಗೂ ಎಸ್​​ಡಿಆರ್​​ಎಫ್​​ಗೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಅನಿಲ ಸ್ಥಳಾಂತರಿಸುವ ಎಸ್‌ಎಪಿಎ ಮಾದರಿ ಬಿಎಎಸ್‌ಎಫ್ ಸಂಸ್ಥೆಯಲ್ಲಿ ಮಾತ್ರ ಇರುವುದರಿಂದ ಅವರಿಂದಲೇ ಕಾರ್ಯಾಚರಣೆ ನಡೆಸಲಾಗಿದೆ. ಟ್ಯಾಂಕರಿನೊಳಗೆ ಒಟ್ಟು 33,000 ಲೀಟರ್ ಅನಿಲವಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗದಂತೆ ಒಳಪ್ರದೇಶದಲ್ಲಿ ಮಧ್ಯಾಹ್ನ ನಂತರ ಕಾರ್ಯಾಚರಣೆ ಆರಂಭಿಸಲಾಗಿದೆ. ಕೆಲ ಮೀಟರ್ ಹಂತದಲ್ಲಷ್ಟೇ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗಿತ್ತು. ವಾಹನ ಹಾಗು ಜನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿಲ್ಲ.

ಇದನ್ನೂ ಓದಿ: 14 ವರ್ಷಗಳ ಬಳಿಕ ಕುಟುಂಬ ಸೇರಿದ ವ್ಯಕ್ತಿ: ಮಗನ ಕನವರಿಸಿ ಕಣ್ಮುಚ್ಚಿದ ತಾಯಿ

Last Updated : Dec 9, 2024, 9:33 PM IST

ABOUT THE AUTHOR

...view details