ಬೆಂಗಳೂರು: ನನಗೂ ಕೆಪಿಸಿಸಿ ಅಧ್ಯಕ್ಷನಾಗಬೇಕೆಂಬ ಆಸೆ ಇದೆ. ಅದರ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದರು.
ಬೆಂಗಳೂರಲ್ಲಿಂದು ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಎಲ್ಲರಿಗೂ ಮುಕ್ತ ಅವಕಾಶಗಳಿವೆ. ಹೈಕಮಾಂಡ್ ಸೂಕ್ತ ತೀರ್ಮಾನ ಮಾಡಲಿದೆ ಎಂದರು.
ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸುತ್ತಿರುವ ವಿಚಾರಕ್ಕೆ, ಚಂದ್ರಶೇಖರನ್ ಒಬ್ಬ ಒಳ್ಳೆಯ ಅಧಿಕಾರಿ. ಅವರ ಆತ್ಮಹತ್ಯೆಯಿಂದ ತುಂಬ ಬೇಸರವಾಗಿದೆ. ಡೆತ್ ನೋಟ್ನಲ್ಲಿ ಕೆಲವು ಆರೋಪಗಳನ್ನು ಮಾಡಿದ್ದಾರೆ. ಪ್ರಕರಣವನ್ನು ಸರ್ಕಾರ ಕೂಡಲೇ ತನಿಖೆಗೆ ಒಪ್ಪಿಸಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತದೆ. ಆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ. ಇಲ್ಲಿ ದಲಿತರು ದಲಿತೇತರ ಹಣ ಅಂತಲ್ಲ. ಅದು ಸರ್ಕಾರದ ಹಣ. ಅಂತೆ ಕಂತೆಗಳ ಮೇಲೆ ಮಾತನಾಡಲು ಆಗಲ್ಲ. ಈಶ್ವರಪ್ಪ ಪ್ರಕರಣವೇ ಬೇರೆ, ಇದು ಬೇರೆ. ಅದಕ್ಕೂ ಇದಕ್ಕೂ ಹೋಲಿಕೆ ಸರಿಯಲ್ಲ. ವಿರೋಧ ಪಕ್ಷದವರು ರಾಜೀನಾಮೆ ಕೇಳ್ತಾರೆ. ಸತ್ಯಾಸತ್ಯತೆ ಹೊರಗಡೆ ಬರಲಿ. ಆ ನಂತರ ಸರ್ಕಾರ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.