ಕರ್ನಾಟಕ

karnataka

ETV Bharat / state

ನಾನು ರಾಜೀನಾಮೆ ಕೊಡ್ತೀನಿ ಅಂತ ಕಾಯ್ಕೊಂಡು ಕುಳಿತಿದ್ದೀರಾ, ಅದು ಅಸಾಧ್ಯ: ಸಿಎಂ ಸಿದ್ದರಾಮಯ್ಯ - MUDA Land Scam

ನಾನು ರಾಜೀನಾಮೆ ಕೊಡ್ತೀನಿ ಅಂತ ಕಾಯ್ಕೊಂಡು ಕೂತಿದ್ದೀರಾ, ಅದು ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Siddaramaiah Reaction On Muda Scam Case
ಸಿಎಂ ಸಿದ್ದರಾಮಯ್ಯ (ETV Bharat)

By ETV Bharat Karnataka Team

Published : Sep 24, 2024, 9:43 PM IST

ಬೆಂಗಳೂರು: ನಾನು ಹೋರಾಟದಿಂದ ಬಂದವನು. ಯಾವುದಕ್ಕೂ ಹೆದರಲ್ಲ. ರಾಜೀನಾಮೆಯೂ ನೀಡಲ್ಲ. ನಿಮ್ಮ ಷಡ್ಯಂತ್ರವನ್ನು ಸೋಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ - ಜೆಡಿಎಸ್​ಗೆ ನೇರ ಎಚ್ಚರಿಕೆ ನೀಡಿದರು.

ಯಲಹಂಕದ ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370 ಮೆ.ವ್ಯಾ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ನಾನು ರಾಜೀನಾಮೆ ಕೊಡ್ತೀನಿ ಅಂತ ಕಾಯ್ಕೊಂಡು ಕುಳಿತಿದ್ದೀರಾ? ಯಾವ ತಪ್ಪನ್ನೂ ಮಾಡದ ನನ್ನನ್ನು ಷಡ್ಯಂತ್ರದಿಂದ ಇಳಿಸಲು ನೋಡುತ್ತಿದ್ದೀರಿ. ಇದು ಅಸಾಧ್ಯ. ನಾನು ಹೋರಾಟ ರಾಜಕಾರಣದಿಂದ ಬಂದವನು. ನಿಮ್ಮನ್ನು ರಾಜಕೀಯವಾಗಿ ಎದುರಿಗೆ ಗೆಲ್ತೀನಿ. ನಿಮ್ಮ ಷಡ್ಯಂತ್ರ ಸೋಲಿಸ್ತೀನಿ ಎಂದು ಬಹಿರಂಗವಾಗಿ ತೊಡೆತಟ್ಟಿದರು.

ಸಿಎಂ ಸಿದ್ದರಾಮಯ್ಯ (ETV Bharat)

ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿ ಆಗಿದ್ದೇವೆ:ರಾಜ್ಯದ ಆರ್ಥಿಕ - ಸಾಮಾಜಿಕ ಪ್ರಗತಿಗೆ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಬೇಕು. ಕೃಷಿ, ಕೈಗಾರಿಕೆ ಬೆಳವಣಿಗೆ ಆದರೆ ಮಾತ್ರ GDP ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕೃಷಿ ಮತ್ತು ಕೈಗಾರಿಕೆ ಹಾಗೂ ವಸತಿಗೆ ಅಪಾರ ಪ್ರಮಾಣದ ವಿದ್ಯುತ್ ಅಗತ್ಯ. ಕೃಷಿ, ಕೈಗಾರಿಕೆ ಅಭಿವೃದ್ಧಿಯಿಂದ ಉದ್ಯೋಗ ಸೃಷ್ಟಿಯಾಗುತ್ತದೆ. ಉದ್ಯೋಗದಿಂದ ಜಿಡಿಪಿ ಪ್ರಗತಿಯಾಗುತ್ತದೆ. ಆದ್ದರಿಂದ ನಾವು ವಿದ್ಯುತ್ ಉತ್ಪಾದನೆಯಲ್ಲಿ ಸಂಪೂರ್ಣ ಸ್ವಾವಲಂಬಿಗಳಾಗುವ ದಿಕ್ಕಿನಲ್ಲಿ ಸಾಗುತ್ತಿದ್ದೇವೆ. ಅದರ ಭಾಗವಾಗಿಯೇ ಈ ವಿದ್ಯುತ್ ಉತ್ಪಾದನಾ ತಯಾರಿಕಾ ಘಟಕ ಲೋಕಾರ್ಪಣೆ ಮಾಡಿದ್ದೇನೆ ಎಂದರು.

1500 ಮೌಲ್ಯದ ಕೋಟಿ ವಿದ್ಯುತ್ ಅನ್ನು ನಾವು ಹೊರಗಡೆಗೆ ಮಾರಾಟ ಮಾಡಿದ್ದೇವೆ. ಕಳೆದ ವರ್ಷ ಮಳೆ ಬರಲಿಲ್ಲ. ಬರಗಾಲ ಇತ್ತು. ಬರಗಾಲದಲ್ಲೂ ಕೂಡ ನಾವು ಅಗತ್ಯ ವಿದ್ಯುತ್ ಪೂರೈಸಿದೆವು. 2030ಕ್ಕೆ 60000 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಗುರಿ ಇದೆ. ಇದನ್ನು ನಾನು ಬಜೆಟ್​ನಲ್ಲೇ ಘೋಷಿಸಿದ್ದೇನೆ. ವರ್ಷದಿಂದ ವರ್ಷಕ್ಕೆ ವಿದ್ಯುತ್ ಬಳಕೆ, ಬೇಡಿಕೆ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವಾಗಿ ನಾವು ಉತ್ಪಾದನೆ ಹೆಚ್ಚಿಸಿ ಸ್ವಾವಲಂಬಿ ಆಗಿದ್ದೇವೆ. ನಾವು ಹೊರಗಡೆಗೆ ವಿದ್ಯುತ್ ಮಾರಾಟ ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ ಎಂದರು.

ABOUT THE AUTHOR

...view details