ಕರ್ನಾಟಕ

karnataka

ETV Bharat / state

ರಮೇಶ ಕತ್ತಿ ಕಾಂಗ್ರೆಸ್​ಗೆ ಬರುವುದಾದರೆ ನಾನು ಸ್ವಾಗತಿಸುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ - Lok Sabha Election

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಬೇಕೆನ್ನುವ ಕುರಿತು ಕಾಂಗ್ರೆಸ್ ಮುಖಂಡರೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಸಭೆ ನಡೆಸಿ ಚರ್ಚಿಸಿದರು.

Minister Satish Jarkiholi spoke.
ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದರು.

By ETV Bharat Karnataka Team

Published : Mar 17, 2024, 9:11 PM IST

ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದರು.

ಚಿಕ್ಕೋಡಿ:ಬಿಜೆಪಿ ಟಿಕೆಟ್ ವಂಚಿತರಾದ ರಮೇಶ್ ಕತ್ತಿ ಅವರು ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ನಾನು ಸ್ವಾಗತಿಸುತ್ತೇನೆ ಎಂದು ಬೆಳಗಾವಿ ಜಿಲ್ಲೆಯ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ಹಂಚಿಕೆ ಮಾಡಬೇಕು ಎಂಬ ನಿಟ್ಟಿನಲ್ಲಿ ಕೈ ಮುಖಂಡರ ಸಭೆ ನಡೆಸಿ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ರಮೇಶ್ ಕತ್ತಿ ಕಾಂಗ್ರೆಸ್ ಪಕ್ಷಕ್ಕೆ ಬಂದ್ರೆ ಸ್ವಾಗತ ಮಾಡುತ್ತೇವೆ ಹಾಗೂ ಅವರ ಆಗಮನದ ಬಗ್ಗೆ ಕಾರ್ಯಕರ್ತರ ಸಭೆ ನಡೆಸುತ್ತಿದ್ದೇವೆ ಎಂದು ಹೇಳಿದರು.

ನಾಯಕರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ:ಈ ಭಾಗದ ಸೂಕ್ತ ಅಭ್ಯರ್ಥಿಗಳ ಬಗ್ಗೆ ಅಥಣಿ ಶಾಸಕ ಲಕ್ಷ್ಮಣ ಸವದಿ, ವಿಧಾನಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಕಾಗವಾಡ ಶಾಸಕ ರಾಜು ಕಾಗೆ ಸೇರಿದಂತೆ ಚಿಕ್ಕೋಡಿ ಭಾಗದ ನಾಯಕರ ಅಭಿಪ್ರಾಯ ಪಡೆಯಲು ಸಭೆ ನಡೆಸುತ್ತಿದ್ದೇವೆ. ರಮೇಶ್ ಕತ್ತಿ ಅವರೊಂದಿಗೆ ಈವರೆಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಮಾತುಕತೆ ಆಗಿಲ್ಲ. ರಮೇಶ್ ಕತ್ತಿ ಜೊತೆಗೆ ಯಾರೇ ಪಕ್ಷಕ್ಕೆ ಬಂದ್ರು ನಾನು ಸ್ವಾಗತ ಮಾಡುತ್ತೇವೆ, ನಮ್ಮ ನಡೆ ಗೆಲ್ಲುವ ಕಡೆ ಇದೆ ಎಂದು ತಿಳಿಸಿದರು.

ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧೆ ಪೈನಲ್ ಆಗಿಲ್ಲ: ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿ ಲೋಕಸಭೆಗೆ ಚುನಾವಣೆಗೆ ನಿಲ್ಲಿಸುವ ವಿಚಾರವಾಗಿ ಕಾರ್ಯಕರ್ತರು ಹಾಗೂ ನಾಯಕರ ಸಭೆ ಮಾಡುತ್ತಿದ್ದೇವೆ. ಅಂತಿಮ ಹಂತದ ಅಭ್ಯರ್ಥಿ ಆಯ್ಕೆ ಕುರಿತು ನಮ್ಮ ನಾಯಕರ ಸಭೆ ಮಾಡುತ್ತಿದ್ದೇನೆ. ಇಂದು ಮತ್ತು ನಾಳೆ ಎರಡು ದಿನ ಸಭೆ ಮಾಡುತ್ತೇನೆ ಎಂದರು.

8 ಕ್ಷೇತ್ರದ ಹಾಲಿ ಮಾಜಿ ಶಾಸಕರ ಅಭಿಪ್ರಾಯ ಸಂಗ್ರಹ ಮಾಡುತ್ತೇನೆ. ಪ್ರಿಯಂಕಾ ಆಗಿರಬಹುದು ಅಥವಾ ಬೇರೆ ಅಭ್ಯರ್ಥಿ ಆಗಿರಬಹುದು ಎಲ್ಲರ ಅಭಿಪ್ರಾಯ ಪಡೆದು ಮುಂದಿನ ಅಭಿಪ್ರಾಯ ಹೈಕಮಾಂಡ್​ಗೆ ರವಾನೆ ಮಾಡುತ್ತೇವೆ. ಮುಂದಿನ ನಿರ್ಧಾರವನ್ನು ಹೈಕಮಾಂಡ್ ಮಾಡಲಿದೆ. ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧೆ ಇದುವರೆಗೂ ಫೈನಲ್ ಆಗಿಲ್ಲ. ಚಿಕ್ಕೋಡಿ ವ್ಯಾಪ್ತಿಯ ಕಾರ್ಯಕರ್ತರ ಒಪ್ಪಿಗೆ ಬಳಿಕ ಅಂತಿಮ ನಿರ್ಧಾರವನ್ನು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಇದನ್ನೂಓದಿ:ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವವರೆಗೂ ಹೋರಾಟ: ಬಿ.ವೈ ವಿಜಯೇಂದ್ರ

ABOUT THE AUTHOR

...view details