ಕರ್ನಾಟಕ

karnataka

ETV Bharat / state

ಹುಟ್ಟುಹಬ್ಬದ ದಿನವೇ ಹಾಸ್ಟೆಲ್ ಕಟ್ಟಡದಿಂದ ಬಿದ್ದು ಐಐಎಂ ವಿದ್ಯಾರ್ಥಿ ಸಾವು - IIM STUDENT DIES

ಹುಟ್ಟುಹಬ್ಬದ ದಿನವೇ ಹಾಸ್ಟೆಲ್ ಕಟ್ಟಡದಿಂದ ಬಿದ್ದು ಎಂಬಿಎ ಎರಡನೇ ವರ್ಷದ ವಿದ್ಯಾರ್ಥಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

student dies
ನಿಲಯ್ (IIM X Post)

By ETV Bharat Karnataka Team

Published : Jan 6, 2025, 11:51 AM IST

ಬೆಂಗಳೂರು:ಹಾಸ್ಟೆಲ್ ಕಟ್ಟಡದ 3ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ಸ್ನಾತಕೋತ್ತರ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ಮೃತನನ್ನು ಎಂಬಿಎ ಎರಡನೇ ವರ್ಷದ ವಿದ್ಯಾರ್ಥಿ ಗುಜರಾತ್ ಮೂಲದ ನಿಲಯ್ ಕೈಲಾಶ್‌ಭಾಯ್ ಪಟೇಲ್ (28) ಎಂದು ಗುರುತಿಸಲಾಗಿದೆ.

ಶನಿವಾರ ನಿಲಯ್ ತನ್ನ ಹುಟ್ಟುಹಬ್ಬವಿದ್ದ ಕಾರಣ ಸ್ನೇಹಿತರೊಂದಿಗೆ ಹೊರಗಡೆ ತೆರಳಿದ್ದ. ನಂತರ ಹಾಸ್ಟೆಲ್​ನಲ್ಲಿರುವ ಸ್ನೇಹಿತನ‌ ಕೊಠಡಿಯಲ್ಲಿ ನಿಲಯ್ ಹುಟ್ಟುಹಬ್ಬ ಆಚರಿಸಲಾಗಿತ್ತು. ಬಳಿಕ ತನ್ನ ಕೋಣೆಗೆ ಹಿಂತಿರುಗುತ್ತಿದ್ದಾಗ ಅವಘಡ ಸಂಭವಿಸಿದೆ. ಭಾನುವಾರ ಬೆಳಗ್ಗೆ ಹಾಸ್ಟೆಲ್ ಭದ್ರತಾ ಸಿಬ್ಬಂದಿ ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ಯಾಂಪಸ್‌ ಆವರಣದ ಹಾಸ್ಟೆಲ್‌ನ ಬೇರೆ ಬ್ಲಾಕ್‌ನಲ್ಲಿರುವ ಸ್ನೇಹಿತರ ಕೋಣೆಯಲ್ಲಿ ಹುಟ್ಟುಹಬ್ಬ ಆಚರಿಸಲು ನಿಲಯ್ ತೆರಳಿದ್ದ. ರಾತ್ರಿ 11.30ರ ಸುಮಾರಿಗೆ ಸ್ನೇಹಿತನ ಕೊಠಡಿಯಿಂದ ಹೊರಟು 'ಎಫ್' ಬ್ಲಾಕ್​​ನಲ್ಲಿರುವ ತನ್ನ ಕೋಣೆಗೆ ವಾಪಸಾಗುವಾಗ ಘಟನೆ ಸಂಭವಿಸಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ. ಹಾಸ್ಟೆಲ್​ನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಭಾನುವಾರ ಸಂಜೆ ಬೆಂಗಳೂರಿಗೆ ಆಗಮಿಸಿದ ನಿಲಯ್ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ನಿಲಯ್ ಸಾವಿನ ಕುರಿತು ಸ್ಪಷ್ಟನೆ ನೀಡುವಂತೆ ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್​​ಗೆ ಒತ್ತಾಯಿಸಿದೆ.

ಇದನ್ನೂ ಓದಿ:ಉತ್ತರ ಕನ್ನಡ: ಒಂಟಿ ಮಹಿಳೆಯರ ಕೊಲೆ ಪ್ರಕರಣ: ಬಾಡೂಟ, ಸಿಸಿಟಿವಿಯಿಂದ ಸೆರೆಸಿಕ್ಕ ಹಂತಕರು

ABOUT THE AUTHOR

...view details