ಕರ್ನಾಟಕ

karnataka

ETV Bharat / state

ಅಕ್ರಮವಾಗಿ ಫೋನ್ ಕರೆ ದಾಖಲೆಗಳ ಸಂಗ್ರಹಣೆ ಆರೋಪ : ಐಶ್ವರ್ಯಾ ಗೌಡ ವಿರುದ್ಧ ಮತ್ತೊಂದು ಎಫ್ಐಆರ್ - FIR AGAINST AISHWARYA GOWDA

ಖುದ್ದು ಪ್ರಕರಣದ ತನಿಖಾಧಿಕಾರಿಯಾಗಿರುವ ಎಸಿಪಿ‌ ಭರತ್ ರೆಡ್ಡಿ ಅವರು ನೀಡಿರುವ ದೂರಿನ ಮೇರೆಗೆ ಬ್ಯಾಟರಾಯನಪುರ ಠಾಣೆಯಲ್ಲಿ ಐಶ್ವರ್ಯಾ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ.

Another FIR against Aishwarya Gowda
ಐಶ್ವರ್ಯಾ ಗೌಡ ವಿರುದ್ಧ ಮತ್ತೊಂದು ಎಫ್ಐಆರ್ (ETV Bharat)

By ETV Bharat Karnataka Team

Published : Feb 8, 2025, 3:41 PM IST

ಬೆಂಗಳೂರು:ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಸಹೋದರಿ ಎಂದು ಕೋಟ್ಯಾಂತರ ರೂ. ವಂಚಿಸಿದ ಆರೋಪ ಎದುರಿಸುತ್ತಿರುವ ಐಶ್ವರ್ಯಾ ಗೌಡ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಅಕ್ರಮವಾಗಿ ಹಲವು ವ್ಯಕ್ತಿಗಳ ಫೋನ್ ಕರೆ ದಾಖಲೆಗಳನ್ನು (ಸಿಡಿಆರ್) ಪಡೆದುಕೊಂಡಿರುವ ಆರೋಪ ಐಶ್ವರ್ಯಾ ಗೌಡ ವಿರುದ್ಧ ಕೇಳಿ ಬಂದಿದ್ದು, ಖುದ್ದು ಪ್ರಕರಣದ ತನಿಖಾಧಿಕಾರಿಯಾಗಿರುವ ಎಸಿಪಿ‌ ಭರತ್ ರೆಡ್ಡಿ ಅವರು ನೀಡಿರುವ ದೂರಿನ ಮೇರೆಗೆ ಬ್ಯಾಟರಾಯನಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ವಂಚನೆ ಪ್ರಕರಣ ದಾಖಲಾಗುತ್ತಿದ್ದಂತೆ ಐಶ್ವರ್ಯಾ ಗೌಡ ಅವರ 5 ಹಾಗೂ ಅವರ ಪತಿಯ 2 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಅವುಗಳಲ್ಲಿದ್ದ ಡೇಟಾ ಸಂಗ್ರಹಣೆಗಾಗಿ ನ್ಯಾಯಾಲಯದ ಅನುಮತಿ ಪಡೆದು ಪಶ್ಚಿಮ ವಿಭಾಗದ ಸಿಇಎನ್ ಠಾಣೆಗೆ ರವಾನಿಸಿದ್ದರು. ಆ ಫೋನ್‌ಗಳಲ್ಲಿರುವ ಡೇಟಾವನ್ನು ಸಂಗ್ರಹಿಸಿದಾಗ ಅದರಲ್ಲಿ ಹಲವು ವ್ಯಕ್ತಿಗಳ ಸಿಡಿಆರ್ ವಿವರಗಳು ಪತ್ತೆಯಾಗಿವೆ. ಫೋನ್ ಕರೆ ದಾಖಲೆಗಳು ಖಾಸಗಿಯಾಗಿದ್ದು, ಸಾಮಾನ್ಯವಾಗಿ ಅಪರಾಧ ಪ್ರಕರಣಗಳ ತನಿಖೆ ನಡೆಸುವಾಗ ತನಿಖಾ ಸಂಸ್ಥೆ ಅಥವಾ ತನಿಖಾಧಿಕಾರಿಗಳು ಮಾತ್ರವೇ ಅಗತ್ಯತೆ ಅನುಸಾರ ಅವುಗಳನ್ನು ಪಡೆದುಕೊಳ್ಳುವ ಅವಕಾಶ ಹೊಂದಿರುತ್ತಾರೆ ಎಂದು ಎಫ್​ಐಆರ್​ ದಾಖಲಾಗಿದೆ.

ಆದರೆ ಆರೋಪಿ ಐಶ್ವರ್ಯಾ ಗೌಡ ಅಕ್ರಮವಾಗಿ ಅನೇಕ ವ್ಯಕ್ತಿಗಳ ಸಿಡಿಆರ್ ಪಡೆದುಕೊಂಡಿರುವುದು ಬಯಲಾಗಿದೆ. ಆದ್ದರಿಂದ ಐಶ್ವರ್ಯಾ ಗೌಡ ಹಾಗೂ ಆಕೆಗೆ ಸಿಡಿಆರ್ ನೀಡಿರುವ ತನಿಖಾ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ವೈದ್ಯೆಗೆ ವಂಚನೆ: ಐಶ್ವರ್ಯಾ ಗೌಡ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಸೂಚನೆ

ABOUT THE AUTHOR

...view details