ಕರ್ನಾಟಕ

karnataka

ETV Bharat / state

ಹಣ ಅಕ್ರಮ ವರ್ಗಾವಣೆ ಆರೋಪ; ಸಚಿವ ಬಿ. ನಾಗೇಂದ್ರ ರಾಜೀನಾಮೆ ಸಾಧ್ಯತೆ - Nagendra likely resign - NAGENDRA LIKELY RESIGN

ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ವಿಧಾನಸೌಧದಲ್ಲಿ ಇಂದು ತುರ್ತು ಮಾಧ್ಯಮಗೋಷ್ಟಿ ನಡೆಸಲಿದ್ದಾರೆ.‌ ತಮ್ಮ ರಾಜೀನಾಮೆ ಘೋಷಿಸುವ ಸಾಧ್ಯತೆ ಇದೆ.

B. Nagendra
ಬಿ.ನಾಗೇಂದ್ರ (ETV Bharat)

By ETV Bharat Karnataka Team

Published : Jun 6, 2024, 4:22 PM IST

ಬೆಂಗಳೂರು:ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಣ ಅಕ್ರಮ ವರ್ಗಾವಣೆ ಆರೋಪ ಹಿನ್ನೆಲೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಕೆಲವೇ ಕ್ಷಣದಲ್ಲಿ ಅವರು ಮಾಧ್ಯಮಗೋಷ್ಟಿ ನಡೆಸಲಿದ್ದು, ರಾಜೀನಾಮೆ ಘೋಷಿಸುವ ಸಾಧ್ಯತೆಯಿದೆ.

ವಾಲ್ಮೀಕಿ ನಿಗಮದಲ್ಲಿನ 187 ಕೋಟಿ ಅಕ್ರಮ ಆರೋಪ ಪ್ರಕರಣ ಸಂಬಂಧ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರನ್ನು ಸಚಿವ ಬಿ.ನಾಗೇಂದ್ರ ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ನಾಗೇಂದ್ರ ರಾಜೀನಾಮೆಗೆ ಪ್ರತಿಪಕ್ಷ ಬಿಜೆಪಿ ಪಟ್ಟು ಹಿಡಿದಿದೆ. ಅಲ್ಲದೇ, ಈ ಕುರಿತು ರಾಜಪಾಲರಿಗೂ ದೂರು ನೀಡಿದೆ.

ಹೀಗಾಗಿ ಪಕ್ಷ ಹಾಗೂ ಸರ್ಕಾರಕ್ಕೆ ಆಗುವ ಮುಜುಗರ ತಪ್ಪಿಸಲು ಹಾಗೂ ಒತ್ತಡ ಹೆಚ್ಚಾಗುತ್ತಿರುವ ಹಿನ್ನೆಲೆ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸುವ ಸಾಧ್ಯತೆ ಇದೆ. ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಎಸ್​ಐಟಿ ರಚಿಸಿದ್ದು, ನಿನ್ನೆ ಇಬ್ಬರನ್ನು ಬಂಧಿಸಿದೆ. ಮತ್ತೊಂದೆಡೆ, ಸಿಬಿಐ ಸಹ ಎಫ್​ಐಆರ್ ದಾಖಲಿಸಿಕೊಂಡಿದೆ.

ಇದನ್ನೂ ಓದಿ:ಪಕ್ಷ, ಸರ್ಕಾರದ ಘನತೆ ಉಳಿಸಲು ಸ್ವಯಂ ಪ್ರೇರಣೆಯಿಂದ ನಾಗೇಂದ್ರ ರಾಜೀನಾಮೆಗೆ ಮುಂದಾಗಿದ್ದಾರೆ: ಡಿ.ಕೆ. ಶಿವಕುಮಾರ್

ABOUT THE AUTHOR

...view details