ಹುಬ್ಬಳ್ಳಿ:''ಧಾರವಾಡ ಲೋಕಸಭಾ ಮತಕ್ಷೇತ್ರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಂದ ದಮನಕಾರಿ ಆಡಳಿತ ನಡೆಯುತ್ತಿದೆ. ಅವರ ಬದಲಾವಣೆಗೆ ಕೊಟ್ಟ ಸಮಯ ಮುಗಿದಿದೆ. ನಮ್ಮ ನಿಲುವಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಜೋಶಿ ಅವರನ್ನು ಸೋಲಿಸುವುದೇ ನಮ್ಮ ಗುರಿ'' ಎಂದು ಶಿರಹಟ್ಟಿಯ ಫಕೀರೇಶ್ವರ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
ನಗರದಲ್ಲಿ ಇಂದು (ಭಾನುವಾರ) ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ''ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲಿಂಗಾಯತ ಸಮುದಾಯ ಸೇರಿದಂತೆ ಇತರ ಸಮುದಾಯಕ್ಕೂ ಅನ್ಯಾಯ ಮಾಡಿದ್ದಾರೆ. ಹೀಗಾಗಿ ಅವರನ್ನು ಮಾ.31ರೊಳಗೆ ಬದಲಾವಣೆ ಮಾಡಬೇಕು ಎಂದು ಗಡುವು ನೀಡಿದ್ದೇವೆ. ಆ ಕ್ಷೇತ್ರಕ್ಕೆ ಬಿಜೆಪಿ ಹೈಕಮಾಂಡ್ ಲಿಂಗಾಯತ ಸಮುದಾಯದ ನಾಯಕನನ್ನು ನಿಲ್ಲಿಸಿ ಗೆಲ್ಲಿಸಬೇಕು'' ಎಂದರು.