ಬೆಂಗಳೂರು:ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಭಾನುವಾರ ಸಂಜೆ ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಯ ಸಮೀಪದ ಪಾರ್ಕ್ನಲ್ಲಿ ನಡೆದಿದೆ.
ಮಲ್ಲೇಶ್ವರಂನ ಎಂ.ಡಿ.ಬ್ಲಾಕ್ ನಿವಾಸಿ ಪನ್ನಿರ್ ಸೆಲ್ವಂ (37) ಹತ್ಯೆಯಾದ ವ್ಯಕ್ತಿ. ಗಾರೆ ಕೆಲಸ ಮಾಡಿಕೊಂಡಿದ್ದ ಪನ್ನೀರ್ ಸೆಲ್ವಂ ಪತ್ನಿ ಹಾಗೂ ನಾಲ್ವರು ಮಕ್ಕಳೊಂದಿಗೆ ವಾಸವಾಗಿದ್ದ. ಭಾನುವಾರ ಸಂಜೆ ಪನ್ನೀರ್ ಸೆಲ್ವಂ ಹಾಗೂ ಇನ್ನಿಬ್ಬರ ನಡುವೆ ಗಲಾಟೆ ನಡೆದಿದ್ದು, ಇದೇ ವೇಳೆ ಆತನ ಮೇಲೆ ಹಲ್ಲೆ ನಡೆಸಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಸದ್ಯ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.