ಕರ್ನಾಟಕ

karnataka

ETV Bharat / state

ಮುಂದಿನ ದಿನಗಳಲ್ಲಿ ಇನ್ನಷ್ಟು ಮುಖಂಡರು ಬಿಜೆಪಿಗೆ ಸೇರ್ಪಡೆ: ಬಿ. ವೈ.ವಿಜಯೇಂದ್ರ - BJP

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಸಚಿವ ಬಾಬುರಾವ್ ಚೌಹಾಣ್, ಮಾಜಿ ಶಾಸಕರಾದ ವಿಶ್ವನಾಥ್ ಪಾಟೀಲ್, ಹೆಚ್ ಪಿ ರಾಜೇಶ್, ಮುಖಂಡ ಶಶಿಧರ್ ಯಲಿಗಾರ್ ಅವರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಇಂದು ಸೇರ್ಪಡೆಗೊಂಡರು.

Former minister Baburao Chauhan, former MLA Vishwanath Patil joined BJP.
ಮಾಜಿ ಸಚಿವ ಬಾಬುರಾವ್ ಚೌಹಾಣ್, ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

By ETV Bharat Karnataka Team

Published : Mar 14, 2024, 4:53 PM IST

ಬೆಂಗಳೂರು:ಇತರ ಪಕ್ಷಗಳ ನಾಯಕರು ಬಿಜೆಪಿ ಸೇರುತ್ತಿರುವುದು ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಯಾವ ದಿಕ್ಕಿನಲ್ಲಿ ವಾತಾವರಣ ಸಾಗುತ್ತಿದೆ ಎನ್ನುವ ಮುನ್ಸೂಚನೆ ಇದು. ಮುಂದಿನ ದಿನಗಳಲ್ಲಿ ಮತ್ತಷ್ಟು ಜನ ಬಿಜೆಪಿ ಸೇರಲಿದ್ದಾರೆ. ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಅವರನ್ನು ಸ್ವಾಗತಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕಲಬುರ್ಗಿಯ ಹಿರಿಯ ಧುರೀಣ, ಮಾಜಿ ಸಚಿವ ಬಾಬುರಾವ್ ಚೌಹಾಣ್, ಬೈಲಹೊಂಗಲದ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್, ಜಗಳೂರಿನ ಮಾಜಿ ಶಾಸಕ ಹೆಚ್.ಪಿ. ರಾಜೇಶ್, ಶಿಗ್ಗಾಂವಿ ಮುಖಂಡ ಶಶಿಧರ್ ಯಲಿಗಾರ್ ಅವರು ತಮ್ಮ ಬೆಂಬಲಿಗರ ಜೊತೆ ಬಿಜೆಪಿಗೆ ಸೇರಿದರು. ಅವರಿಗೆ ಪಕ್ಷದ ಧ್ವಜ ನೀಡಿ ಶಾಲು ಹೊದಿಸಿ ಮುಖಂಡರನ್ನು ಪಕ್ಷಕ್ಕೆ ಬರ ಮಾಡಿ ಕೊಳ್ಳಲಾಯಿತು.

ಬಿಜೆಪಿ ಪರ ಅಲೆ ಇದೆ:ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಾತನಾಡಿ, ಚುನಾವಣೆ ಎದುರಿಸುವ ಕಾಲಘಟ್ಟದಲ್ಲಿ ನಾವಿದ್ದೇವೆ, ಇಡೀ ದೇಶದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾಕ್ಕೆ ಬರಬೇಕು. ಮೋದಿ ಮೂರನೇ ಬಾರಿಗೆ ಪ್ರಧಾನಿ ಆಗಬೇಕು ಎನ್ನುವ ನಿಟ್ಟಿನಲ್ಲಿ ವಾತಾವರಣ ಇದೆ. ಬಿಜೆಪಿ ಪರ ಅಲೆ ಇದೆ. ದೇಶದ ಬೇರೆ ಬೇರೆ ನಗರಗಳಲ್ಲಿಯೂ ಬಿಜೆಪಿ ಸೇರುತ್ತಿದ್ದಾರೆ. ಇಂದು ನಾಲ್ಕು ಪ್ರಮುಖ ನಾಯಕರು ಬಿಜೆಪಿ ಸೇರಿದ್ದು, ಇವರ ಸೇರ್ಪಡೆ ಪಕ್ಷಕ್ಕೆ ಶಕ್ತಿ ತಂದಿದೆ. ಮೋದಿ, ಬಿಜೆಪಿ ಒಪ್ಪಿ ಪಕ್ಷದ ಸಿದ್ದಾಂತ ಒಪ್ಪಿ ಯಾರೇ ಬಂದರೂ ಅವರನ್ನು ಸ್ವಾಗತ ಮಾಡುತ್ತೇನೆ. ಬಂದಿರುವ ನಾಯಕರನ್ನು ಪಕ್ಷದ ಬದಲವರ್ದನೆಗೆ ಬಳಸಿಕೊಳ್ಳಲಿದ್ದೇವೆ ಎಂದು ತಿಳಿಸಿದರು.

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವಾರು ಯೋಜನೆಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ದೇಶದ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಸರಕಾರ ಬೇಕು ಎಂಬ ಜನರು ತೀರ್ಮಾನಕ್ಕೆ ಬಂದಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಸಂಸದ ಜಿ ಎಂ ಸಿದ್ದೇಶ್ವರ್, ವಿಧಾನಪರಿಷತ್ ಮುಖ್ಯಸಚೇತಕ ಎನ್ ರವಿಕುಮಾರ್ ಮತ್ತು ಶಾಸಕ ಶೈಲೇಂದ್ರ ಬೆಲ್ದಾಳೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ:ಬಿಜೆಪಿಯವರು ಕೇಂದ್ರದಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

ABOUT THE AUTHOR

...view details