ಕರ್ನಾಟಕ

karnataka

By ETV Bharat Karnataka Team

Published : 4 hours ago

ETV Bharat / state

ನಾಡಹಬ್ಬ ದಸರಾ ಸಂಭ್ರಮ ಶುರು : ಮೊದಲ ದಿನದ ಕಾರ್ಯಕ್ರಮಗಳ ವಿವರ ಹೀಗಿದೆ! - Inauguration of Dasara

ವಿಜೃಂಭಣೆಯ ನಾಡ ಹಬ್ಬ ದಸರಾಗೆ ಮೈಸೂರು ಸಜ್ಜಾಗಿದ್ದು, ಚಾಮುಂಡಿ ತಾಯಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಇಂದಿನಿಂದ 10 ದಿನಗಳ ನವರಾತ್ರಿ ಉತ್ಸವ ಗರಿಗೆದರಲಿದೆ. ಈ 10 ದಿನವೂ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಅವುಗಳಿಗೂ ಗಣ್ಯರು ಇಂದು ಚಾಲನೆ ನೀಡಲಿದ್ದಾರೆ. ಮಾಹಿತಿ ಹೀಗಿದೆ..

MYSURU DASARA 2024
ಮೈಸೂರು ದಸರಾ ಇಂದಿನಿಂದ ಆರಂಭವಾಗಲಿದೆ. (IANS)

ಮೈಸೂರು:ನಾಡಹಬ್ಬ ಮೈಸೂರು ದಸರಾಗೆ ಇಂದು ಅಧಿಕೃತ ಚಾಲನೆ ಸಿಗಲಿದೆ. ಈ ಮೂಲಕ ರಾಜ್ಯದೆಲ್ಲೆಡೆ ನವರಾತ್ರಿ ಹಬ್ಬ ಆರಂಭವಾಗಲಿದೆ. ಇಂದು ಬೆಳಗ್ಗೆ 9.15 ರಿಂದ 9.45 ರವರೆಗಿನ ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸಲಾಗುತ್ತದೆ.

ತದನಂತರ ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯನವರು ಕಾರ್ಯಕ್ರಮ ಉದ್ಘಾಟಿಸುವ ಮೂಲಕ ಚಾಮುಂಡಿ ತಾಯಿಗೆ ಪುಪ್ಪಾರ್ಚನೆ ಮಾಡಿ ದಸರಾಗೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕ ಜಿ.ಟಿ. ದೇವೆಗೌಡ ಅವರು ವಹಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಭಾಗವಹಿಸಲಿದ್ದಾರೆ.

ಮೊದಲ ದಿನ ದಸರಾದ ಎಲ್ಲಾ ಕಾರ್ಯಕ್ರಮಗಳ ವಿವರ:

ದಸರಾ ಚಲನಚಿತ್ರೋತ್ಸವ ಉದ್ಘಾಟನೆ: ದಸರಾ ನಿಮಿತ್ತ ಇಂದು ಬೆಳಗ್ಗೆ 11:30 ಗಂಟೆಗೆ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿನ ಘಟಿಕೋತ್ಸವ ಭವನದಲ್ಲಿ ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.

ದಸರಾ ಆಹಾರ ಮೇಳ ಉದ್ಘಾಟನೆ: ಮಧ್ಯಾಹ್ನ 11:30 ಗಂಟೆಗೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಹಾರ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಾಹರಗಳ ಸಚಿವ ಕೆ.ಎಚ್. ಮುನಿಯಪ್ಪ ಉದ್ಘಾಟಿಸಲಿದ್ದಾರೆ

ಫಲಪುಷ್ಪ ಪ್ರದರ್ಶನ ಉದ್ಘಾಟನೆ: ಮಧ್ಯಾಹ್ನ 12:30 ಗಂಟೆಗೆ ನಗರದ ಕುಪ್ಪಣ್ಣ ಪಾರ್ಕ್ (ನಿಶಾದ್ ಬಾಗ್) ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಕೂಡ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.

ದಸರಾ ಕುಸ್ತಿ ಉದ್ಘಾಟನೆ: ಸಂಜೆ 04 ಗಂಟೆಗೆನಗರದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಅವರಣದಲ್ಲಿನ ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ "ದಸರಾ ಕುಸ್ತಿ ಪಂದ್ಯಾವಳಿ" ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ.

ದಸರಾ ಶಿಲ್ಪಕಲೆ ಮತ್ತು ಚಿತ್ರಕಲಾ ಶಿಬಿರ ಉದ್ಘಾಟನೆ: ಸಂಜೆ 4 ಗಂಟೆಗೆ ಸಿದ್ಧಾರ್ಥ ನಗರದಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ "ರಾಜ್ಯಮಟ್ಟದ ಶಿಲ್ಪಕಲೆ ಮತ್ತು ಚಿತ್ರಕಲಾ ಶಿಬಿರ"ದಲ್ಲಿ ರಚಿಸಲಾದ ಕಲಾ ಕೃತಿಗಳ ಪ್ರದರ್ಶನ, ಲಲಿತ ಕಲೆ, ಕರಕುಶಲ ಕಲೆಗಳ ಕಲಾಕೃತಿ ಪ್ರದರ್ಶನ ಮತ್ತು ರಾಷ್ಟ್ರಮಟ್ಟದ ಕರಕುಶಲ ಕಲೆಗಳ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್​ ತಂಗಡಗಿ ಅವರು ಉದ್ಘಾಟಿಸಲಿದ್ದಾರೆ.

ದಸರಾ ಸಿಎಂ ಕಪ್‌ ಕ್ರೀಡಾಕೂಟಕ್ಕೆ ಚಾಲನೆ:ಸಂಜೆ 4:30 ಗಂಟೆಗೆ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮವನ್ನು ಸಿಎಂ ಉದ್ಘಾಟಿಸಲಿದ್ದಾರೆ.

ದಸರಾ ಪುಸ್ತಕ ಮೇಳ ಉದ್ಘಾಟನೆ: ಸಂಜೆ 5 ಗಂಟೆಗೆ ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಪುಸ್ತಕ ಮೇಳ ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಉದ್ಘಾಟಿಸಲಿದ್ದಾರೆ.

ದಸರಾ ನವರಾತ್ರಿ ಜಾನಪದ ರಂಗ ಉತ್ಸವ ಉದ್ಘಾಟನೆ: ಸಂಜೆ 5:30 ಗಂಟೆಗೆ ನಗರದ ಕಲಾಮಂದಿರದಲ್ಲಿನ ರಂಗಾಯಣದ ಭೂಮಿಗೀತದ ರಂಗ ಮಂದಿರದಲ್ಲಿ "ನವರಾತ್ರಿ ಜಾನಪದ ರಂಗ ಉತ್ಸವ" ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮವನ್ನು ಸಹ ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸಲಿದ್ದಾರೆ.

ಸಾಂಸ್ಕೃತಿಕಾ ಕಾರ್ಯಕ್ರಮ ಉದ್ಘಾಟನೆ:ಸಂಜೆ 6 ಗಂಟೆಗೆ ಅರಮನೆಯ ಆವರಣದಲ್ಲಿ ನಾಡಹಬ್ಬ ಪ್ರಯುಕ್ತ ದಸರಾ ಸಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್​​ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ.

ದಸರಾ ದೀಪಾಲಂಕಾರಕ್ಕೆ ಚಾಲನೆ: ಸಂಜೆ 6.30ಕ್ಕೆ ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಹಸಿರು ಮಂಟಪದ ಬಳಿ ವಿದ್ಯುತ್ ದೀಪಾಲಂಕಾರ ಹಾಗೂ ದೀಪಾಲಂಕಾರಗೊಂಡಿರುವ "ವಿದ್ಯುತ್ ರಥ"ದ ಚಾಲನೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಇಂಧನ ಸಚಿವ ಕೆ.ಜೆ. ಜಾರ್ಜ್ ಉದ್ಘಾಟಿಸಲಿದ್ದಾರೆ.

ವಸ್ತು ಪ್ರದರ್ಶನ ಉದ್ಘಾಟನೆ:ರಾತ್ರಿ 7.30ಕ್ಕೆ ನಗರದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆಯೋಜಿಸಲಾಗಿರುವ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಸಿಎಂ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಮತ್ತು ಸರ್ಕಾರದ ವಿವಿಧ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳು ಭಾಗವಹಿಸುವರು.

ಇದನ್ನೂ ಓದಿ:ನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ ಹೇಳಿದ್ದೇನು? - Mysuru Dasara 2024

ABOUT THE AUTHOR

...view details