ಕರ್ನಾಟಕ

karnataka

ETV Bharat / state

ಪಂಜಿನ ಮೆರವಣಿಗೆ, ಪಾರಂಪರಿಕ ನಡಿಗೆಗೆ ಒಲಿದು ಬಂದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ - ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಪಾರಂಪರಿಕ ನಡಿಗೆ ಹಾಗೂ ಪಂಜಿನ ಮೆರವಣಿಗೆ ಯಶಸ್ವಿ ಆಯೋಜನೆಗಾಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಲಭಿಸಿದೆ.

India Book of Record  Maximum people participated  heritage walk  ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ  ಪಾರಂಪರಿಕ ನಡಿಗೆ
ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

By ETV Bharat Karnataka Team

Published : Feb 24, 2024, 5:17 PM IST

ಹುಬ್ಬಳ್ಳಿ:ಕಳೆದ ಒಂದು ತಿಂಗಳಿನಿಂದ ಸಂವಿಧಾನ ಜಾಗೃತಿ ಜಾಥಾವನ್ನು ಜಿಲ್ಲೆಯಾದ್ಯಂತ ಯಶಸ್ವಿಯಾಗಿ ನಡೆಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಾಂಸ್ಕೃತಿಕ ನಾಯಕ ಬಸವಣ್ಣನವರ ವಿಚಾರಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಈ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸರ್ಕಾರಕ್ಕೆ ಒಳ್ಳೆಯ ಕೀರ್ತಿ ತರುವ ಕಾರ್ಯಕ್ರಮ ಇದಾಗಿದೆ. ಇಂಡಿಯಾ ಬುಕ್ ಆಫ್ ರೆಕಾರ್ಡ್​​ನಲ್ಲಿ ಎರಡು ದಾಖಲೆಗಳು ಸೇರ್ಪಡೆ ಆಗಿವೆ.

ಇಂದು ಪಾಲಿಕೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಕ್ರೀಡಾ ಇಲಾಖೆ ಮತ್ತು ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಎರಡು ವಿಶೇಷ ಕಾರ್ಯಕ್ರಮಗಳಾದ ಪಾರಂಪರಿಕ ನಡಿಗೆ ಹಾಗೂ ಪಂಜಿನ ಮೆರವಣಿಗೆ ಯಶಸ್ವಿ ಆಯೋಜನೆಗಾಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪ್ರಮಾಣಪತ್ರ ವಿತರಣಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಎಲ್ಲಾ ಶಾಸಕರು ಪಕ್ಷಾತೀತವಾಗಿ ಯಶಸ್ವಿಯಾಗಿ ಕಾರ್ಯಕ್ರಮ ನಡೆಯುವಲ್ಲಿ ಸಹಕರಿಸಿದ್ದಾರೆ‌. ಜಾಥಾದಲ್ಲಿ ಭಾಗವಹಿಸಿದ್ದ ಇಲಾಖೆಗಳ ಅಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಗ್ಯಾರಂಟಿ ಯೋಜನೆಗಳ ಮುಖಾಂತರ ರೂ.58 ಸಾವಿರ ಕೋಟಿ ರೂಪಾಯಿ ಹಣವನ್ನು ಬಡವರ ಮನೆಗೆ ತಲುಪುವಂತೆ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ಜನರ ಕಲ್ಯಾಣವಾಗುತ್ತಿದೆ. ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಾತನಾಡಿ, ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಜನವರಿ 26 ರಿಂದ ಪ್ರಾರಂಭಗೊಂಡಿತು. 146 ಗ್ರಾಮಗಳು ಹಾಗೂ ಎಲ್ಲಾ ವಾರ್ಡ್​ಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಯಶಸ್ವಿಯಾಗಿ ನಡಿದಿದೆ. ಸಚಿವರು ಅರ್ಥಪೂರ್ಣ ಕಾರ್ಯಕ್ರಮ ಇದಾಗಬೇಕು ಎಂದು ನಿರ್ದೇಶನ ನೀಡಿದ್ದರು. ಅದರಂತೆ ಯಶಸ್ವಿಯಾಗಿ ಕಾರ್ಯಕ್ರಮ ನಡೆದಿದೆ. ಸಂವಿಧಾನ ಜಾಗೃತಿ ಜಾಥಾ ಸ್ಪರ್ಧೆಯಲ್ಲಿ ಜಿಲ್ಲೆಯು ಮೊದಲ 10 ದಿನಗಳಲ್ಲಿ ಮೊದಲನೇ ಸ್ಥಾನದಲ್ಲಿತ್ತು. ನಂತರ 3ನೇ ಸ್ಥಾನಕ್ಕೆ ಇಳಿಕೆ ಕಂಡಿತು. ಹಲವಾರು ವಿಶೇಷ ಕಾರ್ಯಕ್ರಮಗಳ ಆಯೋಜನೆ ನಂತರ ಪುನಃ ಮೊದಲ ಸ್ಥಾನ ಗಳಿಸಿತು. ಎಲ್ಲಾ ಶಾಲೆಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರ ಸಹಭಾಗಿತ್ವದಲ್ಲಿ ಜಾಥಾ ಕಾರ್ಯಕ್ರಮವನ್ನು ಉತ್ಸುಕತೆಯಿಂದ ಆಯೋಜನೆ ಮಾಡಿ, ಪಾರಂಪರಿಕ ನಡಿಗೆ ಹಾಗೂ ಪಂಜಿನ ಮೆರವಣಿಗೆ ಸಾಧನೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಸಂದಿವೆ. ಇಡೀ ರಾಜ್ಯದಲ್ಲಿ ಜಾಥಾ ಕಾರ್ಯಕ್ರಮ ಹೆಸರಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

ದೆಹಲಿಯ ಇಂಡಿಯಾ ಬುಕ್​ ಆಫ್ ರೆಕಾರ್ಡ ಸಂಸ್ಥೆಯ ತೀರ್ಪುಗಾರ ನರವಿಜಯ ಮಾತನಾಡಿ, ಅತಿ ಹೆಚ್ಚು ಜನರು ಪಾರಂಪರಿಕ ನಡಿಗೆ ಹಾಗೂ ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಂಡಿರುವುದರಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಹಲವಾರು ದಾಖಲೆಗಳು ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುಸ್ತಕದಲ್ಲಿ ದಾಖಲಾಗಿವೆ. ದೇಶದಲ್ಲಿ ಯಾವುದೇ ವಿಶೇಷ ಸಾಧನೆ, ದಾಖಲೆಗಳು ಇಲ್ಲದಿರುವುದನ್ನು ಗಣನೆಗೆ ತೆಗೆದುಕೊಂಡು ವಿಶೇಷ ದಾಖಲೆ ಮಾಡಿದವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ ಏಷ್ಯಾ ಬುಕ್ ಆಫ್ ರೆಕಾರ್ಡ್​ನಲ್ಲಿ ಧಾರವಾಡ ಜಿಲ್ಲೆ ಹೆಸರು ಮಾಡಲಿ ಎಂದು ಹಾರೈಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹಾಗೂ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ದೆಹಲಿಯ ಇಂಡಿಯಾ ಬುಕ್ಕ್ ಆಫ್ ರೆಕಾರ್ಡ್​ ಸಂಸ್ಥೆಯ ತೀರ್ಪುಗಾರ ನರವಿಜಯ ಅವರಿಂದ ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಎರಡು ವಿಶೇಷ ಕಾರ್ಯಕ್ರಮಗಳಾದ ಪಾರಂಪರಿಕ ನಡಿಗೆ ಹಾಗೂ ಪಂಜಿನ ಮೆರವಣಿಗೆಯನ್ನು ಯಶಸ್ವಿ ಆಯೋಜನೆ ಮಾಡಿದ್ದಕ್ಕೆ ಇಂಡಿಯನ್ ಬುಕ್ ಆಫ್ ರೆಕಾರ್ಡ್​ ಪ್ರಶಸ್ತಿ ಪ್ರಮಾಣಪತ್ರವನ್ನು ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕರು ಹಾಗೂ ಸಾಮಾಜಿಕ ಕಾರ್ಯಕರ್ತರಿಗೆ ಸನ್ಮಾನ ಮಾಡಲಾಯಿತು.

ಓದಿ:ಪೆನ್ಸಿಲ್ ತುದಿಯಲ್ಲಿ 1.3 ಸೆಂ ಮೀಟರ್​ದ ಶ್ರೀರಾಮ ವಿಗ್ರಹ ರಚಿಸಿದ ಶಿಲ್ಪ ಕಲಾವಿದ..

ABOUT THE AUTHOR

...view details