ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಮರ್ಥನೆ ಮಾಡುವುದಿಲ್ಲ. ಆದರೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಯಾರೆಲ್ಲರ ಹೆಸರು ಕೇಳಿಬಂದಿದೆಯೋ ಅವರೆಲ್ಲರ ವಿಚಾರಣೆಯಾಗಬೇಕು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಸಿಎಂ ಹಾಗು ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಆರ್.ಟಿ.ನಗರ ನಿವಾಸದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಪ್ರಕರಣದಲ್ಲಿ ಮಾಹಿತಿ ಕೊಟ್ಟವರನ್ನೇ ಬಂಧಿಸಲಾಗುತ್ತಿದೆ. ಎಸ್ಐಟಿ ತನಿಖೆ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನು ಅವರು ಬಂಧಿಸ್ತಿಲ್ಲ. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದರೆ ಸಿಬಿಐಗೆ ವಹಿಸಲಿ ಎಂದರು.