ಕರ್ನಾಟಕ

karnataka

ETV Bharat / state

ಸುಬ್ರಹ್ಮಣ್ಯ ಸುತ್ತಮುತ್ತಲಿನ ಪರಿಸರದಲ್ಲಿ ಸಿಡಿಲು ನಿರೋಧಕ ಅಳವಡಿಕೆಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್ - Lightning arresters - LIGHTNING ARRESTERS

ಸಿಡಿಲು ಬಡಿದು ಅನೇಕ ಸಾವು - ನೋವು ಸಂಭವಿಸುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪರಿಸರಗಳಲ್ಲಿ ನಾಲ್ಕರಿಂದ ಆರು ಕಡೆಗಳಲ್ಲಿ ಸಿಡಿಲು ನಿರೋಧಕ ಅಳವಡಿಕೆ ಕ್ರಮ ವಹಿಸಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

DINESH GUNDU RAO REACT
ಸಚಿವ ದಿನೇಶ್ ಗುಂಡೂರಾವ್ (ETV Bharat)

By ETV Bharat Karnataka Team

Published : Jun 11, 2024, 7:35 AM IST

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಪುತ್ತೂರು ಭಾಗದಲ್ಲಿ ಸಿಡಿಲು ಬಡಿದು ಆರೇಳು ಮಂದಿಯ ಸಾವು ಸಂಭವಿಸಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಕಾರಣದಿಂದ ಸಿಡಿಲಾಘಾತದ ನಿಯಂತ್ರಣಕ್ಕೆ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪರಿಸರಗಳಲ್ಲಿ ನಾಲ್ಕರಿಂದ ಆರು ಕಡೆಗಳಲ್ಲಿ ಸಿಡಿಲು ನಿರೋಧಕ ಅಳವಡಿಕೆ ಕ್ರಮ ವಹಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಾಕೃತಿಕ ವಿಕೋಪದ ಬಗ್ಗೆ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಒಂದು ಕಡೆ ಸಿಡಿಲು ನಿರೋಧಕ ಅಳವಡಿಸಿದ್ದಲ್ಲಿ 500 ಮೀಟರ್​ನಿಂದ 1.50 ಕಿ.ಮೀ. ವ್ಯಾಪ್ತಿಯಲ್ಲಿ ಸಿಡಿಲಾಘಾತವನ್ನು ತಪ್ಪಿಸಲು ಸಾಧ್ಯ. ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ‌. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈಗಾಗಲೇ ಈ ಸಿಡಿಲು ನಿರೋಧಕ ಅಳವಡಿಸಲಾಗಿದೆ. ಅದನ್ನು ನೋಡಿಕೊಂಡು ಕ್ರಮವಹಿಸಲಾಗುತ್ತದೆ ಎಂದರು.

ಜಿಲ್ಲೆಯ ಕೆಲವು ಭಾಗಗಳಲ್ಲಿ ಅನಧಿಕೃತವಾಗಿ ಕೆಂಪುಮಣ್ಣು ಸಾಗಾಟ ಮಾಡುವ ಬಗ್ಗೆ ದೂರು ಬಂದಿದೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಏನಾದರೂ ಲೋಪಗಳಾದಲ್ಲಿ ಅಧಿಕಾರಿಗಳೇ ಹೊಣೆ ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ. ಕಡಲ್ಕೊರೆತ ಸಮಸ್ಯೆಗೆ ಬಟ್ಟಪಾಡಿಯಲ್ಲಿ ಮರವಂತೆ ಮಾದರಿಯಲ್ಲಿ ಕಾಮಗಾರಿ ನಡೆಸಲು ಬಂದರು ಇಲಾಖೆ 80 ಕೋಟಿ ರೂ. ಪ್ರಸ್ತಾವನೆ ಕೊಟ್ಟಿದೆ. ಇದನ್ನು ಪರಿಶೀಲನೆ ಮಾಡುತ್ತಿದ್ದೇವೆ ಎಂದರು.

ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಲ್ಲಡ್ಕದಲ್ಲಿ ರಸ್ತೆ ಹದಗೆಟ್ಟಿರುವ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎನ್​ಹೆಚ್​ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದೇನೆ‌. 2-3 ದಿನಗಳಲ್ಲಿ ರಸ್ತೆಯನ್ನು ಸಂಚಾರ ಯೋಗ್ಯ ಮಾಡಬೇಕು. ಅಲ್ಲದೇ ಮತ್ತೆ ರಸ್ತೆ ಹದಗೆಟ್ಟಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ತಾಕೀತು ಮಾಡಿದ್ದೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಇದನ್ನೂ ಓದಿ:ರಾಜ್ಯದಲ್ಲಿ ಮುಂಗಾರು ಭೋರ್ಗರೆತ: ಐದು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ - Karnataka Monsoon

ABOUT THE AUTHOR

...view details