ಕರ್ನಾಟಕ

karnataka

ETV Bharat / state

ಬಡ್ಡಿ ಮನ್ನಾ: ಸಹಕಾರಿ ಬ್ಯಾಂಕ್​ಗಳ ಸಾಲದ ಅಸಲು ಪಾವತಿ ಮಾ.31ಕ್ಕೆ ವಿಸ್ತರಣೆ

ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು 31-12-2023ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು ಪಾವತಿಸಲು 31-03-2024 ರವರೆಗೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ.

ವಿಧಾನಸೌಧ Vidhansoudha
ವಿಧಾನಸೌಧ

By ETV Bharat Karnataka Team

Published : Mar 15, 2024, 8:10 AM IST

Updated : Mar 15, 2024, 1:41 PM IST

ಬೆಂಗಳೂರು:ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು 31-12-2023ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು ಪಾವತಿಸಲು ನಿಗದಿಪಡಿಸಿದ್ದ 29-02-2024ರ ದಿನಾಂಕವನ್ನು 31-03-2024 ರವರೆಗೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ.

ಸರ್ಕಾರ ರೈತರು ರಾಜ್ಯದ ಸಹಕಾರ ಸಂಘಗಳು ಅಂದರೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು 31.12.2023ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು 29-02-2024 ರೊಳಗೆ ಸಂಬಂಧಪಟ್ಟ ಪತ್ತಿನ ಸಹಕಾರ ಸಂಘ/ಬ್ಯಾಂಕುಗಳಿಗೆ ಪೂರ್ತಿಯಾಗಿ ಮರುಪಾವತಿಸಿದಲ್ಲಿ ಈ ಮೊತ್ತಕ್ಕೆ ಬಾಕಿಯಿರುವ ಬಡ್ಡಿಯನ್ನು ಮನ್ನಾ ಮಾಡಲು ಆದೇಶಿಸಿತ್ತು. ಜೊತೆಗೆ ಈ ರೀತಿ ಮನ್ನಾ ಮಾಡಿದ ಬಡ್ಡಿ ಮೊಬಲಗನ್ನು ಸಹಕಾರ ಸಂಘಗಳಿಗೆ ಸರ್ಕಾರ ಭರ್ತಿ ಮಾಡಲು ಕೆಲವು ಷರತ್ತಿಗೊಳಪಟ್ಟು ಮಂಜೂರಾತಿ ನೀಡಿ ಆದೇಶಿಸಲಾಗಿತ್ತು.

ಈ ಯೋಜನೆಯಡಿ ಸಹಕಾರ ಸಂಘಗಳು ಸಲ್ಲಿಸಿದ ಮಾಹಿತಿಯನ್ವಯ 29-02-2024 ರವರೆಗೆ 29,456 ರೈತರು 281.88 ಕೋಟಿ ರೂ. ಸುಸ್ತಿ ಸಾಲವನ್ನು ಮರುಪಾವತಿಸಿದ್ದು, ಇದರ ಮೇಲೆ ಸರ್ಕಾರದ ಬಡ್ಡಿ 214.55 ರೂ. ಆಗಿದೆ.‌ ಬರಗಾಲ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರೈತರ ಅನುಕೂಲಕ್ಕಾಗಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಯೋಜನೆಯಡಿ ಸುಸ್ತಿ ಸಾಲಗಳ ಮರುಪಾವತಿ ಅವಧಿಯನ್ನು 31-03-2024 ರವರೆಗೆ ವಿಸ್ತರಿಸುವಂತೆ ನಿಬಂಧಕರು ಕೋರಿದ್ದರು.‌

ಈ ಹಿನ್ನೆಲೆ ಸರ್ಕಾರ ರಾಜ್ಯದ ರೈತರು ಸಹಕಾರ ಸಂಘಗಳು ಅಂದರೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು 31-12-2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು ಪಾವತಿಸಲು ನಿಗದಿಪಡಿಸಿದ್ದ ದಿನಾಂಕ 29-02-2024ನ್ನು 31-03-2024 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ:ಔಪಚಾರಿಕವಾಗಿ ಮಾತನಾಡಲು ನನ್ನನ್ನು ಅಮಿತ್ ಶಾ ದೆಹಲಿಗೆ ಕರೆದಿದ್ದರು: ಜನಾರ್ದನ ರೆಡ್ಡಿ

Last Updated : Mar 15, 2024, 1:41 PM IST

ABOUT THE AUTHOR

...view details