ಮಂಗಳೂರು: ಅಸೋಸಿಯೇಶನ್ ಆಫ್ ಪೆಡಲ್ ಸರ್ಫ್ ಪ್ರೊಫೆಶನಲ್ಸ್ ಎಸಿಪಿ ವರ್ಲ್ಡ್ ವತಿಯಿಂದ ರಾಷ್ಟ್ರದಲ್ಲೇ ಪ್ರಪ್ರಥಮ ಬಾರಿಗೆ ಮಾರ್ಚ್ 8 ರಿಂದ 10ರ ವರೆಗೆ ಸಸಿಹಿತ್ಲು ಮುಂಡಾ ಬೀಚ್ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸ್ಟ್ಯಾಂಡ್ ಅಪ್ ಪೆಡಲ್ ಸರ್ಫಿಂಗ್ ಸ್ಪರ್ಧೆ ನಡೆಯಲಿದೆ.
ರಾಜ್ಯ ಸರ್ಕಾರದ ಪ್ರವಾಸೋದ್ಯಮ ಇಲಾಖೆ ಮತ್ತು ಸರ್ಫಿಂಗ್ ಸ್ವಾಮಿ ಫೌಂಡೇಶನ್ ಸಹಯೋಗದಲ್ಲಿ ಸ್ಪರ್ಧೆ ಹಾಗೂ ಬೀಚ್ ಫೆಸ್ಟಿವಲ್ ನಡೆಯಲಿದ್ದು, ಈ ಸ್ಪರ್ಧೆಯಲ್ಲಿ ವಿಶ್ವ ರ‌್ಯಾಂಕಿಂಗ್ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರು ಶುಕ್ರವಾರ ತಿಳಿಸಿದ್ದಾರೆ.