ಕರ್ನಾಟಕ

karnataka

ETV Bharat / state

50 ಜನ ಶಾಸಕರಿಗೆ ಬಿಜೆಪಿಯಿಂದ ₹50 ಕೋಟಿ ಆಮಿಷ ಒಡ್ಡಿರುವುದು ನಿಜ: ಡಿ. ಕೆ. ಶಿವಕುಮಾರ್ - DCM D K SHIVAKUMAR

ಕೈ ಶಾಸಕರಿಗೆ 50 ಕೋಟಿ ಆಫರ್ ಆರೋಪ ಬಗ್ಗೆ ಡಿಸಿಎಂ ಡಿ. ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್​ನ ಸಚಿವರಾದ ಸಂತೋಷ್ ಲಾಡ್, ಸತೀಶ್ ಜಾರಕಿಹೊಳಿ, ಕೆ. ಎನ್. ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

DCM D.K. Shivakumar
ಡಿಸಿಎಂ ಡಿ.ಕೆ. ಶಿವಕುಮಾರ್ (ETV Bharat)

By ETV Bharat Karnataka Team

Published : Nov 14, 2024, 1:51 PM IST

Updated : Nov 14, 2024, 2:48 PM IST

ಬೆಂಗಳೂರು: "ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪಕ್ಷದ 50 ಜನ ಕಾಂಗ್ರೆಸ್ ಎಂಎಲ್ಎಗಳಿಗೆ ಬಿಜೆಪಿಯವರು ತಲಾ 50 ಕೋಟಿ ಆಮಿಷ ಒಡ್ಡಿರುವುದು ನಿಜ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಆಪರೇಷನ್ ಕಮಲದ ಬಗ್ಗೆ ನಮ್ಮ ಶಾಸಕರ ಬಳಿ ಮಾತನಾಡಿದ್ದಾರೆ. ಈ ವಿಚಾರವನ್ನು ಕೆಲವರು ಬಂದು ಮುಖ್ಯಮಂತ್ರಿಯ ಬಳಿ ತಿಳಿಸಿದ್ದಾರೆ. ಈ ಸಂಗತಿಯನ್ನು ಮುಖ್ಯಮಂತ್ರಿಗಳು ಮಾಧ್ಯಮದ ಮುಂದೆ ಹೇಳಿದ್ದಾರೆ. ಮಿಕ್ಕ ವಿಚಾರಗಳನ್ನು ಅನಂತರ ನಿಮಗೆ ತಿಳಿಸುತ್ತೇನೆ" ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್​ (ETV Bharat)

ಆಪರೇಷನ್ ಕಮಲದ ಬಗ್ಗೆ ಸಚಿವರು ಹೇಳುವುದೇನು?:50 ಶಾಸಕರಿಗೆ ತಲಾ 50 ಕೋಟಿ ಆಫರ್ ನೀಡಲಾಗ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪ ಸತ್ಯ ಎಂದು ಕಾಂಗ್ರೆಸ್​ ಸಚಿವರು ಸಿಎಂ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿ, "ಆಪರೇಷನ್ ಕಮಲ ವಿಚಾರವಾಗಿ ಸಿದ್ದರಾಮಯ್ಯ ಮಾಡಿರುವ ಆರೋಪ ಸತ್ಯ. ನೇರವಾಗಿ ಹಾಗೂ ಪರೋಕ್ಷವಾಗಿ 18 ತಿಂಗಳಿನಿಂದ ಇಂತಹ ಪ್ರಯತ್ನ ಮಾಡುತ್ತಾ ಇದ್ದಾರೆ. ಬಿಜೆಪಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಎಲ್ಲವೂ ಸಾಧ್ಯ. ಸರ್ಕಾರ ಅಸ್ಥಿರಗೊಳಿಸುವುದೇ ಅವರ‌ ಕೆಲಸವಾಗಿದೆ. ಇದರ ಬಗ್ಗೆ ಖಚಿತ ಮಾಹಿತಿ ಇದೆ. ಅವರು ಪ್ರಯತ್ನ ಮಾಡ್ತಾನೇ ಇದ್ದಾರೆ" ಎಂದು ಆರೋಪಿಸಿದರು.

ಇದೇ ವಿಚಾರವಾಗಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಎಷ್ಟು ಆಮಿಷ ನೀಡಲಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಆದರೆ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಹಿಂದೆಯೂ ನಡೆದಿತ್ತು, ಸರ್ಕಾರ ಇರುವವರೆಗೂ ನಡೆಯಲಿದೆ" ಎಂದರು.

ಕಾಂಗ್ರೆಸ್​ ಸಚಿವರ ಪ್ರತಿಕ್ರಿಯೆ (ETV Bharat)

ಇದೇ ವೇಳೆ ಮಾತನಾಡಿದ ಸಚಿವ ಕೆ. ಎನ್. ರಾಜಣ್ಣ, "ಸಿಎಂ ಸತ್ಯವಾದ ಅಂಶವನ್ನು ಹೇಳಿದ್ದಾರೆ. ವಾಮ ಮಾರ್ಗದ ಮೂಲಕ ಸರ್ಕಾರ ಕೆಡವುವ ಕೆಲಸವನ್ನು ಬಿಜೆಪಿಯವರು ಮಾಡ್ತಾರೆ. 136 ಶಾಸಕರಿರೋ ಸರ್ಕಾರವನ್ನು ಬೀಳಿಸುವ ನಡೆ ಸಂವಿಧಾನಕ್ಕೆ ಮಾಡುವ ಅಪಮಾನ" ಎಂದು ಕಿಡಿಕಾರಿದರು.

ಸಿಎಂ ಆರೋಪ; ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಬುಧವಾರ ಆಯೋಜಿಸಿದ್ದ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿನ 470 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿಗಳ ಉದ್ಘಾಟನೆ ಮತ್ತು ಕಟ್ಟಡಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಿಎಂ ಈ ಹೇಳಿಕೆ ನೀಡಿದ್ದರು. ಈ ಬಾರಿ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ಹಣ ಆಫರ್ ಮಾಡಿತ್ತು. ಈ ಹಣ ಎಲ್ಲಿಂದ ಬರುತ್ತೆ? ಯಡಿಯೂರಪ್ಪ, ಬೊಮ್ಮಾಯಿ, ಅಶೋಕ್ ಹಣ ಪ್ರಿಂಟ್ ಹಾಕಿದ್ದಾರಾ? ರಾಜ್ಯವನ್ನು ಲೂಟಿ ಹೊಡೆದ ಹಣ ತಾನೇ ಎಂದು ಸಿಎಂ ಪ್ರಶ್ನಿಸಿದ್ದರು. ಹೆಚ್ಚಿನ ಮಾಹಿತಿಗಾಗಿ ಈ ಸುದ್ದಿಯನ್ನೂ ಓದಿ-ಬಿಜೆಪಿಯಿಂದ ಕಾಂಗ್ರೆಸ್​ನ 50 ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಆಫರ್: ಸಿಎಂ ಸಿದ್ದರಾಮಯ್ಯ

Last Updated : Nov 14, 2024, 2:48 PM IST

ABOUT THE AUTHOR

...view details