ಕರ್ನಾಟಕ

karnataka

ETV Bharat / state

ಸುರಪುರ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರೋಡ್ ಶೋ - J P Nadda Road Show

ರಾಯಚೂರು-ಯಾದಗಿರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ ನಾಯಕ ಪರವಾಗಿ ಜೆ.ಪಿ.ನಡ್ಡಾ ಮತಯಾಚಿಸಿದರು.

ಸುರಪುರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ರೋಡ್ ಶೋ
ಸುರಪುರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ರೋಡ್ ಶೋ

By ETV Bharat Karnataka Team

Published : Apr 26, 2024, 9:22 PM IST

ಯಾದಗಿರಿ:ನಿಮ್ಮ ಮತದಾನ ಮತ್ತು ಆಶೀರ್ವಾದ ಬಿಜೆಪಿ ಅಭ್ಯರ್ಥಿಗಳಿಗೆ ಅಗತ್ಯವಾಗಿ ಬೇಕಿದೆ. ನಿಮ್ಮೆಲ್ಲರ ಮಧ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಲು ಬಂದಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.

ಇಂದು ನಗರದ ಬಿಜೆಪಿ ಕಚೇರಿಯಿಂದ ತೆರೆದ ವಾಹನದಲ್ಲೇ ಆರಂಭವಾದ ರೋಡ್ ಶೋನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡಲೇಬೇಕಾದರೆ ನೀವುಗಳು ತಮ್ಮ ಅಮೂಲ್ಯವಾದ ಮತ ನೀಡಿ ರಾಯಚೂರು ಲೋಕಸಭಾ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ಮೇ. 7ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ರಾಜಾ ಅಮರೇಶ ನಾಯಕರನ್ನು ದೆಹಲಿಗೆ ಕಳುಹಿಸಿಕೊಡಬೇಕು. ಸುರಪುರದಲ್ಲಿ ಸರಿಯಾದ ಅಭಿವೃದ್ಧಿ ಆಗಬೇಕಾದರೆ, ಸಮರ್ಪಕವಾಗಿ ಆಡಳಿತ ನಡೆಸಲು ವಿಧಾನಸಭೆ ಉಪ ಚುನಾವಣೆಯಲ್ಲಿ ರಾಜೂಗೌಡರಿಗೆ ಮತ ನೀಡಬೇಕು ಎಂದರು.

ಈ ಚುನಾವಣೆ ಮೋದಿಯವರಿಗೆ ಪ್ರಮುಖವಾಗಿದೆ. ದೇಶದ ರಕ್ಷಣೆ ಮತ್ತು ದೇಶದ ವಿಕಾಸಕ್ಕಾಗಿ, ಗ್ರಾಮಗಳ ಅಭಿವೃದ್ಧಿಗಾಗಿ, ರೈತರಲ್ಲಿ ಶಕ್ತಿ ತುಂಬಲು, ಯುವಕರಿಗೆ ಉದ್ಯೋಗ ನೀಡಲು, ದಲಿತರು, ಆದಿವಾಸಿಗಳನ್ನು ಅಭಿವೃದ್ಧಿಗೊಳಿಸಿ ಸಮಾಜದ ಮುಖ್ಯವಾಹಿನಿಗೆ ತರಲು ಮೋದಿ ಆಡಳಿತ ಮುಖ್ಯವಾಗಿದೆ ಎಂದು ತಿಳಿಸಿದರು.

ಸಂಸದ ರಾಜಾ ಅಮರೇಶ ನಾಯಕ ಮಾತನಾಡಿ, ಪ್ರಧಾನಿಯವರ ಕೈ ಬಲಪಡಿಸಲು ಲೋಕಸಭೆ ಚುನಾವಣೆಯಲ್ಲಿ ನನಗೆ ಮತ್ತು ವಿಧಾನಸಭಾ ಉಪಚುನಾವಣೆಯಲ್ಲಿ ರಾಜೂಗೌಡರಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು. ಬಿಜೆಪಿ ಅಭ್ಯರ್ಥಿ ನರಸಿಂಹ ನಾಯಕ (ರಾಜೂಗೌಡ) ಮಾತನಾಡಿ, ಸುರಪುರ ನಗರದಲ್ಲಿ ದಿನದ 24 ಗಂಟೆಯೂ ಕುಡಿಯುವ ನೀರನ್ನು ಒದಗಿಸುವ ಕಾಮಗಾರಿ ಮಾಡಲಾಗಿದೆ. ಇಡೀ ರಾಜ್ಯದಲ್ಲಿ ಕುಡಿಯುವ ನೀರಿಗೆ ಬರಗಾಲವಿದ್ದರೂ ಸುರಪುರಕ್ಕೆ ಕುಡಿಯುವ ನೀರಿನ ತೊಂದರೆ ಆಗದಂತೆ ಕೆಲಸ ಮಾಡಿದ್ದೇನೆ ಎಂದರು.

ಇದನ್ನೂ ಓದಿ:ರಾಹುಲ್ ಗಾಂಧಿ ಹೋದ ಕಡೆಯಲ್ಲೆಲ್ಲಾ ಕಾಂಗ್ರೆಸ್ ಸೋತಿದೆ, ಶಿವಮೊಗ್ಗಕ್ಕೂ ಅವರು ಬರಲಿ: ಈಶ್ವರಪ್ಪ - K S Eshwarappa

ABOUT THE AUTHOR

...view details