ಬೆಳಗಾವಿ : ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುತ್ರ ಮೃಣಾಲ್ ಗೆಲ್ಲಿಸಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಂಚಮಸಾಲಿ ಮತಗಳ ಮೇಲೆ ಕಣ್ಣಿಟ್ಟಿದ್ದಾರೆ. ಇನ್ನೊಂದೆಡೆ ಸಚಿವೆ ಹೆಬ್ಬಾಳ್ಕರ್ ತಂತ್ರಕ್ಕೆ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪ್ರತಿತಂತ್ರ ರೂಪಿಸುತ್ತಿದ್ದಾರೆ.
2ಎ ಮೀಸಲಾತಿ ಹೋರಾಟದ ಬಳಿಕ ಪಂಚಮಸಾಲಿ ಸಮಾಜ ಹೆಚ್ಚಿನ ಪ್ರಮಾಣದಲ್ಲಿ ಸಂಘಟಿತವಾಗಿದೆ. 2ಎ ಮೀಸಲಾತಿ ಹೋರಾಟದ ಸಂದರ್ಭದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮುಂಚೂಣಿಯಲ್ಲಿದ್ದರು. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮೂರು ಲಕ್ಷಕ್ಕೂ ಅಧಿಕ ಪಂಚಮಸಾಲಿ ಮತಗಳಿವೆ. ಹಾಗಾಗಿ, ಪುತ್ರನ ಗೆಲುವಿಗೆ ಪಂಚಮಸಾಲಿ ಸಮಾಜದ ಮುಖಂಡರನ್ನು ಸಂಪರ್ಕಿಸುತ್ತಿರುವ ಲಕ್ಷ್ಮೀ ಹೆಬ್ಬಾಳ್ಕರ್, ಅವರ ವಿಶ್ವಾಸ ಗಳಿಸಲು ಮುಂದಾಗಿದ್ದಾರೆ.
ಹೆಬ್ಬಾಳ್ಕರ್ ತಂತ್ರಕ್ಕೆ ಪ್ರತಿತಂತ್ರ ರೂಪಿಸಿರುವ ಜಗದೀಶ್ ಶೆಟ್ಟರ್ ದಿಢೀರ್ ಎಂದು ಬೆಳಗಾವಿಯಲ್ಲಿ ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅಅವರನ್ನು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಭೇಟಿ ವೇಳೆ ಶ್ರೀಗಳ ಜೊತೆ ಶೆಟ್ಟರ್ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಈ ವೇಳೆ ಸಂಸದೆ ಮಂಗಳಾ ಅಂಗಡಿ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಸೇರಿ ಸ್ಥಳೀಯ ಪಂಚಮಸಾಲಿ ಮುಖಂಡರು ಜಗದೀಶ ಶೆಟ್ಟರ್ ಗೆ ಸಾಥ್ ಕೊಟ್ಟರು.