ಕರ್ನಾಟಕ

karnataka

ETV Bharat / state

ಇಷ್ಟು ದಿನ ಸಹಕರಿಸಿದ್ದಕ್ಕೆ ಧನ್ಯವಾದ: ಬಿಜೆಪಿಗೆ ಸೇರ್ಪಡೆ ಮುನ್ನ ಡಿಕೆಶಿಗೆ ಶೆಟ್ಟರ್​ ರಾಜೀನಾಮೆ ಪತ್ರ ರವಾನೆ - ವಿಧಾನ ಪರಿಷತ್ ಸ್ಥಾನ

ಬಿಜೆಪಿ ಪಕ್ಷಕ್ಕೆ ಮರಳಿ ಸೇರ್ಪಡೆಯಾಗುವ ಮುನ್ನ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ವಿಧಾನ ಪರಿಷತ್ ಸ್ಥಾನಕ್ಕೆ ಹಾಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿರುವ ಪತ್ರವನ್ನು ಡಿಕೆಶಿಗೆ ತಲುಪಿಸಿದ್ದಾರೆ.

Former CM Jagadish Shettar
ಮಾಜಿ ಸಿಎಂ ಜಗದೀಶ್​ ಶೆಟ್ಟರ್​

By ETV Bharat Karnataka Team

Published : Jan 25, 2024, 2:52 PM IST

ಬೆಂಗಳೂರು: ಕಾಂಗ್ರೆಸ್ ತೊರೆದು ಮರಳಿ ಬಿಜೆಪಿ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ಹಾಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪತ್ರ ಬರೆದಿರುವ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಸದಸ್ಯತ್ವಕ್ಕೆ ನಾನು ಈ ದಿನ ನನ್ನ ಸ್ವ-ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಬೇಕಾಗಿ ವಿನಂತಿಸುತ್ತೇನೆ ಎಂದು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ:ಇನ್ನು ಮರಳಿ ಬಿಜೆಪಿ ಸೇರ್ಪಡೆಯಾಗಿರುವ ಜಗದೀಶ್ ಶೆಟ್ಟರ್ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ನಾನು ಈ ದಿವಸ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ದಯವಿಟ್ಟು ರಾಜೀನಾಮೆಯನ್ನು ಸ್ವೀಕರಿಸಬೇಕಾಗಿ ಕೋರಿಕೆ. ಇಲ್ಲಿಯವರೆಗೆ ತಾವು ನನಗೆ ನೀಡಿದ ಸಹಕಾರಕ್ಕಾಗಿ ವಂದನೆಗಳು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್​​ಗೆ ಗುಡ್​ಬೈ: ಬಿಜೆಪಿಗೆ ಮರಳಿದ ಜಗದೀಶ್ ಶೆಟ್ಟರ್

ದೆಹಲಿಯ ಬಿಜೆಪಿ ಪ್ರಧಾನ ಕಾರ್ಯಾಲಯದಲ್ಲಿ ಬಿಜೆಪಿ ಸೇರ್ಪಡೆಯಾಗಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್​ ಬಿಜೆಪಿ ಮರಳಿ ಸೇರಿರುವುದಕ್ಕೆ ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಅವರ ನಾಯಕತ್ವದಲ್ಲಿ ದೇಶ ಮತ್ತು ಪಕ್ಷ ಮತ್ತುಷ್ಟು ಬೆಳೆಯಬೇಕು. ಅದಕ್ಕಾಗಿ ಇಂದು ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಎಂದಿನಂತೆ ಪಕ್ಷಕ್ಕೆ ನಿಷ್ಠೆಯಿಂದ ತನ್ನ ಕೆಲಸ ಮುಂದುವರಿಸುತ್ತೇನೆ ಎಂದು ಬಿಜೆಪಿ ಸೇರಿದ ಬಳಿಕ ಮಾಜಿ ಸಿಎಂ ಜಗದೀಶ್​​ ಶೆಟ್ಟರ್ ಹೇಳಿದರು.

ಇದೇ ವೇಳೆ ಅವರು, ಕಾಂಗ್ರೆಸ್​​ನಲ್ಲಿ ಗೌರವಯುತವಾಗಿ ನಡೆಸಿಕೊಂಡ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೂ ಇದೇ ವೇಳೆ ಧನ್ಯವಾದ ಸಲ್ಲಿಸಿದರು. ಡಿ ಕೆ ಶಿವಕುಮಾರ್ ಅವರಿಗೆ ಇ -ಮೇಲ್​ ಮೂಲಕ ರಾಜೀನಾಮೆ ನೀಡಿದ್ದೇನೆ ಎಂದು ಸುದ್ದಿಗೋಷ್ಠಿ ವೇಳೆ ಶೆಟ್ಟರ್​ ಸ್ಪಷ್ಟಪಡಿಸಿದರು. ಅಷ್ಟೇ ಅಲ್ಲ ತಮ್ಮ ಎಂಎಲ್​ಸಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದೇನೆ. ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ದೂರವಾಣಿ ಕರೆ ಮಾಡಿ ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದೇನೆ. ರಾಜೀನಾಮೆ ಪತ್ರವನ್ನು ಫ್ಯಾಕ್ಸ್​ ಕೂಡಾ ಮಾಡಿದ್ದೇನೆ ಎಂದು ಶೆಟ್ಟರ್​ ಸ್ಪಷ್ಟಪಡಿಸಿದರು.

ಇಂದು ಬೆಳಗ್ಗೆ ಅಮಿತ್ ಶಾ ಅವರನ್ನು ಭೇಟಿಯಾದೆವು. ಅವರು ನನ್ನನ್ನು ಅತ್ಯಂತ ಗೌರವ ಮತ್ತು ಪ್ರೀತಿಯಿಂದ ಬರಮಾಡಿಕೊಂಡರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನೂ ಕೂಡ ಇಂದು ಭೇಟಿಯಾಗುತ್ತೇನೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ, ಡಿ.ಕೆ ಶಿವಕುಮಾರ್ ಅವರಿಗೂ ಈಮೇಲ್ ಸಂದೇಶ ಕಳುಸಿದ್ದೇನೆ. ಹಾಗೆಯೇ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದು, ಈ ಬಗ್ಗೆ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಜೊತೆ ಕೂಡ ಮಾತನಾಡಿದ್ದೇನೆ. ರಾಜೀನಾಮೆ ಪತ್ರ ಕಳುಹಿಸುವ ವ್ಯವಸ್ಥೆ ಮಾಡಿದ್ದೇನೆ ಎಂದು ವಿವರಿಸಿದರು. ಜೊತೆಗೆ, ಇಂದು ಅಧಿಕೃತವಾಗಿ ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಮತ್ತೆ ಬಿಜೆಪಿ ಸೇರಿದ್ದೇನೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

ದೇಶವನ್ನು ಒಗ್ಗೂಡಿಸಲು, ದೇಶದ ಹಿತರಕ್ಷಣೆಗಾಗಿ ಮತ್ತು ವಿಶ್ವದಲ್ಲಿ ದೇಶದ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಲಸ ಮಾಡಿದ್ದು, ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಈ ಆಶಯದ ಮೇರೆಗೆ ಪಕ್ಷಕ್ಕೆ ವಾಪಸ್​ ಆಗಿದ್ದೇನೆ ಎಂದು ಶೆಟ್ಟರ್ ತಿಳಿಸಿದರು. ಬಿಜೆಪಿ ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ನಾನು ಮತ್ತೆ ಬಿಜೆಪಿ ಸೇರಬೇಕೆಂದು ಅಪೇಕ್ಷೆ ವ್ಯಕ್ತಪಡಿಸಿದ್ದರು. ರಾಷ್ಟ್ರೀಯ ನಾಯಕರೂ ಅದೇ ಆಶಯ ವ್ಯಕ್ತಪಡಿಸಿದ್ದರು. ಅದರಂತೆ ಬಿಜೆಪಿಗೆ ವಾಪಸ್​ ಆಗಿದ್ದೇನೆ. ಬಿಜೆಪಿ ಪುನರ್ ಸೇರ್ಪಡೆ ಸಂತೋಷದ ಸಂಗತಿ ಎಂದರು.

ABOUT THE AUTHOR

...view details