ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದಲ್ಲಿ ಜೆಡಿಎಸ್ ಪಾಲಿಗೆ ಮೂರು ಲೋಕಸಭಾ ಕ್ಷೇತ್ರಗಳು ದೊರೆತಿದ್ದು, ಇಂದು ಮೂರೂ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಮಂಡ್ಯ ಕ್ಷೇತ್ರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರನ್ನು ಪ್ರಕಟಿಸಲಾಗಿದ್ದು, ಏಪ್ರಿಲ್ 4 ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ.
ಇನ್ನು ಹಾಸನ ಲೋಕಸಭಾ ಕ್ಷೇತ್ರಕ್ಕೆ ಪ್ರಜ್ವಲ್ ರೇವಣ್ಣ ಅವರ ಹೆಸರು ಘೋಷಣೆಯಾಗಿದೆ. ಆದರೆ ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅವರು ನಿನ್ನೆಯೇ ನಾಮಪತ್ರ ಸಲ್ಲಿಸಿದ್ದಾರೆ.
ಕೋಲಾರ ಕ್ಷೇತ್ರಕ್ಕೆ ಕೊನೇ ಕ್ಷಣದಲ್ಲಿ ಗೊಂದಲ ಮೂಡಿದ್ದ ಕಾರಣ ಆ ಕ್ಷೇತ್ರದ ಮುಖಂಡರ ಜೊತೆ ಕುಮಾರಸ್ವಾಮಿ ಚರ್ಚೆ ನಡೆಸಿದ್ದರು. ನಂತರ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೆಗೌಡ ಅವರ ಬಳಿ ಸಮಾಲೋಚನೆ ನಡೆಸಿದ ಹೆಚ್ಡಿಕೆ ಮೂರು ಹೆಸರುಗಳ ಪೈಕಿ ಕೆಜಿಎಫ್ನ ಮಲ್ಲೇಶ್ ಬಾಬು ಹೆಸರನ್ನು ಅಂತಿಮಗೊಳಿಸಿದ್ದಾರೆ.
ಆದರೆ, ಮೂರು ಕ್ಷೇತ್ರಗಳ ಹೆಸರುಗಳನ್ನು ಅಧಿಕೃತವಾಗಿ ಘೋಷಣೆ ಮಾಡದಿದ್ದರೂ, ಜೆಡಿಎಸ್ನ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ "ಮಂಡ್ಯ, ಕೋಲಾರ ಹಾಗೂ ಹಾಸನ ಲೋಕಸಭಾ ಕ್ಷೇತ್ರಗಳಿಗೆ ಎನ್ಡಿಎ ಮೈತ್ರಿ ಅಭ್ಯರ್ಥಿಗಳಾಗಿ ಆಯ್ಕೆಯಾದ ಹೆಚ್.ಡಿ ಕುಮಾರಸ್ವಾಮಿ (ಮಂಡ್ಯ), ಮಲ್ಲೇಶ್ ಬಾಬು (ಕೋಲಾರ) ಹಾಗೂ ಪ್ರಜ್ವಲ್ ರೇವಣ್ಣ (ಹಾಸನ) ಅವರಿಗೆ ಅಭಿನಂದನೆಗಳು" ಎಂದು ಬರೆದುಕೊಂಡು ಪೋಸ್ಟರ್ ಹಂಚಿಕೊಳ್ಳಲಾಗಿದೆ.
ಇದನ್ನೂ ಓದಿ:ಹಳೆಯ ಕಹಿ ಘಟನೆಗಳನ್ನ ಮರೆತು ಒಗ್ಗಟ್ಟಾಗಿ ಕೆಲಸ ಮಾಡಿ: ಕಾರ್ಯಕರ್ತರಿಗೆ ಹೆಚ್.ಡಿ.ದೇವೇಗೌಡ ಕರೆ - BJP JDS Meeting