ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್​​ಗಳ ಹಂಚಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು - guarantee cards - GUARANTEE CARDS

ಗ್ಯಾರಂಟಿ ಕಾರ್ಡ್ ಹಂಚುವ ಮೂಲಕ ಕಾಂಗ್ರೆಸ್ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದೆ ಎಂದು ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು ನೀಡಿದೆ.

ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು
ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು

By ETV Bharat Karnataka Team

Published : Apr 23, 2024, 7:12 AM IST

ಬೆಂಗಳೂರು: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಅಕ್ರಮಗಳನ್ನು ಎಸಗುತ್ತಿದೆ ಎಂದು ಜೆಡಿಎಸ್ ಪಕ್ಷ ಆರೋಪಿಸಿ, ಚುನಾವಣಾ ಆಯೋಗಕ್ಕೆ ಸೋಮವಾರ ದೂರು ನೀಡಿದೆ. ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಅವರು ಸಹಿ ಮಾಡಿರುವ ಗ್ಯಾರಂಟಿ ಕಾರ್ಡುಗಳನ್ನು ಮತದಾರರಿಗೆ ಹಂಚಲಾಗುತ್ತಿದೆ. ಈ ಮೂಲಕ ಮುಗ್ಧ ಮತದಾರರಿಗೆ ಆಮಿಷ ಒಡ್ಡಿ ಅವರನ್ನು ವಂಚಿಸಲಾಗುತ್ತಿದೆ ಎಂದು ಜೆಡಿಎಸ್ ಆರೋಪ ಮಾಡಿದೆ.

ಮಾಜಿ ಸಚಿವ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಹಿರಿಯ ಮುಖಂಡ ಆರ್.ಪ್ರಕಾಶ್ ಅವರಿದ್ದ ನಾಯಕರ ನಿಯೋಗ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ವಿರುದ್ಧ ದೂರು ನೀಡಿದೆ.

ಪಾರದರ್ಶಕವಾಗಿ, ನಿರ್ಭೀತಿ, ಭ್ರಷ್ಟಾಚಾರ ರಹಿತವಾಗಿ ನಡೆಯಬೇಕಿದ್ದ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡುಗಳನ್ನು ಹಂಚುವ ಮೂಲಕ ಕಲುಷಿತಗೊಳಿಸಿ ಅಕ್ರಮ ನಡೆಸುತ್ತಿದೆ. ನ್ಯಾಯ ಪತ್ರ ಹೆಸರಿನಲ್ಲಿ ಐದು ಗ್ಯಾರಂಟಿ ಕಾರ್ಡುಗಳ ಮೇಲೆ ಸಹಿ ಮಾಡಿ ಮತದಾರರಿಗೆ ಹಂಚಿಕೆ ಮಾಡುತ್ತಿರುವುದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಹಾಗೂ ಚುನಾವಣಾ ಅಕ್ರಮವೂ ಆಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಆ ಗ್ಯಾರಂಟಿ ಕಾರ್ಡುಗಳ ಹಂಚಿಯನ್ನು ತಡೆಯಬೇಕು ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಆಯೋಗವನ್ನು ಆಗ್ರಹಪಡಿಸಿದೆ.

ಇದನ್ನೂ ಓದಿ:ನೀತಿ ಸಂಹಿತೆ ಉಲ್ಲಂಘನೆ ಆರೋಪ; ಕೋರಮಂಗಲ ಬಿಜೆಪಿ ಕಚೇರಿಯ ಮೇಲುಸ್ತುವಾರಿ ವಿರುದ್ಧ ಎಫ್ಐಆರ್ - Election Code Of Conduct

ಅಷ್ಟೇ ಅಲ್ಲದೆ; ಜನತಾ ಪ್ರತಿನಿಧಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯು ಇದಾಗಿದ್ದು, ಕಾಂಗ್ರೆಸ್ ಚುನಾವಣಾ ಆಶಯವನ್ನೇ ಬುಡಮೇಲು ಮಾಡುತ್ತಿದೆ ಎಂಬ ಅಂಶವನ್ನು ಆಯೋಗದ ಗಮನಕ್ಕೆ ತರಲಾಗಿದೆ. ಅಲ್ಲದೆ, ಇಂತಹ ಭರವಸೆಗಳ ಮೂಲಕ ಕಾಂಗ್ರೆಸ್ ಕರ್ನಾಟಕ ಮತ್ತು ದೇಶದ ಆರ್ಥಿಕತೆ, ಬೊಕ್ಕಸಕ್ಕೆ ಹೊರಲಾರದ ಹೊರೆಯನ್ನು ಹೊರೆಸುತ್ತಿದೆ. ಆದ್ದರಿಂದ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದಕ್ಕೆ ಆಯೋಗ ಅತ್ಯಂತ ಕಠಿಣ ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ.

ಇದನ್ನೂ ಓದಿ:ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ - D K Shivakumar

ಇದನ್ನೂ ಓದಿ:ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಎಫ್​ಐಆರ್ ದಾಖಲು - FIR filed against Vijayendra

ABOUT THE AUTHOR

...view details