ಹುಬ್ಬಳ್ಳಿ:ಒಬ್ಬ ವ್ಯಕ್ತಿಯ ವೈಯಕ್ತಿಕ ಘಟನೆಗಳುಯಾವ ಅಭ್ಯರ್ಥಿಗೂ ಮತ್ತು ಪಕ್ಷಕ್ಕೂ ಸಂಬಂಧಪಟ್ಟಿಲ್ಲ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಮಾತ್ರ ಸಂಬಂಧಪಟ್ಟಿದೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಖಂಡಿತವಾಗಿಯೂ ಶಿಕ್ಷೆ ಆಗುತ್ತದೆ, ಅದರಂತೆ ಪಕ್ಷದಿಂದಲೂ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ನಾಳೆ ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ 14 ಕ್ಷೇತ್ರಗಳ ಶಾಸಕರು, ಮಾಜಿ ಶಾಸಕರು ಸೇರಿದಂತೆ ಪ್ರಮುಖರು ಭಾಗಿಯಾಗಲಿದ್ದಾರೆ ಎಂದು ಹೇಳಿದರು.