ಕರ್ನಾಟಕ

karnataka

ETV Bharat / state

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಹೆಚ್​ಡಿಕೆ ಸ್ಪರ್ಧಿಸಲಿ: ಎಂ ಎಸ್ ಹರೀಶ್ ಗೌಡ - ಚಿಕ್ಕಬಳ್ಳಾಪುರ

ಹೆಚ್​ ಡಿ ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಲಿ ನಾವೆಲ್ಲ ಸಹಕಾರ ನೀಡುತ್ತೇವೆ ಎಂದು ಬಿಜೆಪಿಯ ಹಲವು ನಾಯಕರು ಹೇಳಿದ್ದಾರೆ ಎಂದು ಜೆಡಿಎಸ್ ಮುಖಂಡ ಎಂ ಎಸ್ ಹರೀಶ್ ಗೌಡ ತಿಳಿಸಿದ್ದಾರೆ.

Etv Bharatjds-leader-ms-harish-gowda-reaction-on-lokasabha-election
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಹೆಚ್​ಡಿಕೆ ಸ್ಪರ್ಧಿಸಲಿ: ಎಂ ಎಸ್ ಹರೀಶ್ ಗೌಡ

By ETV Bharat Karnataka Team

Published : Feb 11, 2024, 6:22 PM IST

ಎಂ ಎಸ್ ಹರೀಶ್ ಗೌಡ

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ): "ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ಅಥವಾ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಸ್ಪರ್ಧಿಸಬೇಕು ಎಂದು ಕ್ಷೇತ್ರದ ಮುಖಂಡರು ಒತ್ತಾಯಿಸಿರುವುದಾಗಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಎಸ್ ಹರೀಶ್ ಗೌಡ ತಿಳಿಸಿದರು. ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯ ಚೌಡೇಶ್ವರಿ ದೇವಸ್ಥಾನಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ನಿಖಿಲ್​ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಭೆ ಕರೆದಾಗ ಈ ಕ್ಷೇತ್ರದಲ್ಲಿ ಜೆಡಿಎಸ್​ಗೆ ಗೆಲುವಿನ ಅವಕಾಶಗಳಿವೆ. ಹೀಗಾಗಿ ನೀವಾಗಲಿ, ಕುಮಾರಸ್ವಾಮಿ ಅವರಾಗಲಿ ಸ್ಪರ್ಧಿಸಬೇಕು ಎಂದು ಕ್ಷೇತ್ರ ಮುಖಂಡರು ಒತ್ತಾಯಿಸಿದ್ದಾರೆ" ಎಂದು ಹೇಳಿದರು.

"ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಲು ಮೂರ್ನಾಲ್ಕು ಜನ ಆಕಾಂಕ್ಷಿಗಳ ನಡುವೆ ಪೈಪೋಟಿ ನಡೆಯುತ್ತಿದೆ. ಇನ್ನು ಒಂದಿಬ್ಬರೂ ಅದೇ ಸಾಲಿಗೆ ಸೇರುವ ಸಾಧ್ಯತೆ ಇದೆ. ಹೀಗಾಗಿ ಕುಮಾರಸ್ವಾಮಿ ಅವರೇ ಸ್ಪರ್ಧಿಸಲಿ, ನಾವೆಲ್ಲ ಸಹಕಾರ ನೀಡುತ್ತೇವೆ ಎಂದು ಬಿಜೆಪಿಯ ಎಸ್ ಆರ್ ವಿಶ್ವನಾಥ್​, ಡಾ ಕೆ ಸುಧಾಕರ್​ ಮತ್ತು ಎಂಟಿಬಿ ನಾಗರಾಜ್​, ಆರ್​ ಅಶೋಕ್ ಅವರು ಹೇಳಿದ್ದಾರೆ. ನಾವು ಕುಮಾರಸ್ವಾಮಿ ಅವರು ಸ್ಪರ್ಧಿಸಿದರೆ ಹೆಚ್ಚಿನ ರೀತಿ ಕೆಲಸ ಮಾಡಿ ಗೆಲ್ಲಿಸುತ್ತೇವೆ. ಇದಕ್ಕೆ ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅವರಿಗೆ ಈ ಕ್ಷೇತ್ರದ ಮೇಲೆ ಹೆಚ್ಚು ಒಲವಿದೆ ಎಂಬುದು ನಮ್ಮ ಭಾವನೆ" ಎಂದರು.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿ, "ಪುಟ್ಟಣ್ಣ ಅವರು ಅಧಿಕಾರದ ದಾಹದಿಂದ ಎರಡು ವರ್ಷಕ್ಕೂಮ್ಮೆ ಪಕ್ಷ ಬದಲಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಶಿಕ್ಷಕರು ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ನಮ್ಮ ಪಕ್ಷದಿಂದ ಮೈತ್ರಿ ಅಭ್ಯರ್ಥಿಯಾಗಿರುವ ಠಂಗನಾಥ್ ಗೆಲುವು ಸಾಧಿಸಲಿದ್ದಾರೆ. ಪುಟ್ಟಣ್ಣಯ್ಯ ಕಳೆದ ಚುನಾವಣೆಯಲ್ಲಿ ಬೋಗಸ್ ಮತಗಳ ಮೂಲಕ ಗೆಲುವು ಸಾಧಿಸಿದ್ದರು. ಈ ಬಾರಿ ಬೋಗಸ್ ಮತಗಳಿಗೆ ಕಡಿವಾಣ ಹಾಕಿರುವುದು ಮತ್ತು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿರುವುದರಿಂದ ಗೆಲುವು ಸುಲಭವಾಗಲಿದೆ" ಎಂದು ಹೇಳಿದರು.

ಲೋಕಸಭಾ ಚುನಾವಣಾ ಸಮೀಕ್ಷೆ ಪ್ರಕಾರ ಜೆಡಿಎಸ್ ಎರಡು ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿ, "ಚುನಾವಣಾ ಸಮೀಕ್ಷೆಗಳ ಬಗ್ಗೆ ನಮಗೆ ನಂಬಿಕೆ ಇಲ್ಲ, ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ರಾಜ್ಯಗಳಲ್ಲಿ ಅಧಿಕಾರ ಹಿಡಿಯಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿದ್ದವು. ಆದರೆ ಚುನಾವಣಾ ಫಲಿತಾಂಶ ಬೇರೆಯೇ ಆಗಿತ್ತು. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ 28 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದೇವೆ. ಸೀಟು ಹಂಚಿಕೆಯಲ್ಲಿ ಜೆಡಿಎಸ್​ಗೆ ಸಿಗುವ ಎಲ್ಲಾ ಸ್ಥಾನಗಳಲ್ಲೂ ಗೆಲ್ಲುವುದಾಗಿ" ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ:ನಾನು ಮಂಡ್ಯ ಟಿಕೆಟ್ ಆಕಾಂಕ್ಷಿಯಲ್ಲ, ಸುಮಲತಾ ಸ್ಪರ್ಧೆ ಕಾಲವೇ ನಿರ್ಧರಿಸಲಿದೆ: ನಿಖಿಲ್ ಕುಮಾರಸ್ವಾಮಿ

ABOUT THE AUTHOR

...view details