ಬೆಂಗಳೂರು: ಗುರುಮಿಠಕಲ್ ಕ್ಷೇತ್ರದ ಮಾಜಿ ಶಾಸಕರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ಮುಖಂಡ ನಾಗನಗೌಡ ಕಂದಕೂರು ನಿಧನಕ್ಕೆ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಹಾಗು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿದ್ದಾರೆ.
ಗುರುಮಿಠಕಲ್ ಕ್ಷೇತ್ರದ ಮಾಜಿ ಶಾಸಕರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ಮುಖಂಡ ನಾಗನಗೌಡ ಕಂದಕೂರು ಅವರ ಅಗಲಿಕೆ ನನಗೆ ತೀವ್ರ ಆಘಾತವನ್ನುಂಟು ಮಾಡಿದೆ. ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ಅವರು, ದಶಕಗಳಿಂದ ವೈಯಕ್ತಿಕವಾಗಿ ನನಗೆ ಬಹಳ ಆತ್ಮೀಯರಾಗಿದ್ದವರು ಹಾಗೂ ನಮ್ಮ ಕುಟುಂಬದ ಜೊತೆ ಅತ್ಯಂತ ಆತ್ಮೀಯ ಒಡನಾಟ ಹೊಂದಿದ್ದರು. ಮೃತರ ಕುಟುಂಬದವರಷ್ಟೇ ನಾನು ಸಮಾನ ದುಃಖಿತನಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಮತ್ತು ಕುಟುಂಬದವರಿಗೆ, ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಎಕ್ಸ್ ಖಾತೆ ಮೂಲಕ ಸಂತಾಪ ಸೂಚಿಸಿದ್ದಾರೆ.