ಬೆಂಗಳೂರು:ವಿಧಾನ ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮುಂದುವರೆದಿದ್ದು, ಆರು ಕ್ಷೇತ್ರಗಳ ಪೈಕಿ ಬಿಜೆಪಿ ನಾಲ್ಕು, ಜೆಡಿಎಸ್ ಎರಡು ಕ್ಷೇತ್ರಗಳನ್ನು ಹಂಚಿಕೊಂಡಿವೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಜೊತೆಗೆ, ದಕ್ಷಿಣ ಶಿಕ್ಷಕರ ಕ್ಷೇತ್ರವನ್ನೂ ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಕುರಿತು ರಾಜ್ಯ ಬಿಜೆಪಿ ನಾಯಕರಿಗೆ ದೆಹಲಿ ವರಿಷ್ಠರು ಸಂದೇಶ ರವಾನಿಸಿದ್ದಾರೆ.
ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ ನಿಂಗರಾಜೇಗೌಡ ಅವರಿಗೆ ಟಿಕೆಟ್ ಅಂತಿಮಗೊಳಿಸಿ ಬಿಜೆಪಿ ಈ ಹಿಂದೆ ಹೆಸರು ಘೋಷಣೆ ಮಾಡಿತ್ತು. ಆದರೆ, ದಕ್ಷಿಣ ಶಿಕ್ಷಕರ ಕ್ಷೇತ್ರದ ಟಿಕೆಟ್ ನಮಗೇ ಬೇಕು ಎಂದು ಜೆಡಿಎಸ್ ಬೇಡಿಕೆ ಇಟ್ಟಿದೆ. ಹಾಗಾಗಿ, ಘೋಷಿತ ಉಮೇದುವಾರಿಕೆಯನ್ನು ಬಿಜೆಪಿ ವಾಪಸ್ ಪಡೆದುಕೊಂಡಿದೆ. ರಾಜ್ಯದಲ್ಲಿ ಜೂನ್ 3ರಂದು ನಡೆಯಲಿರುವ ದಕ್ಷಿಣ, ವಾಯುವ್ಯ, ಈಶಾನ್ಯ ಸೇರಿದಂತೆ 6 ಕ್ಷೇತ್ರಗಳ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಪೈಕಿ ಈಗಾಗಲೇ ಬಿಜೆಪಿ 4 ಕ್ಷೇತ್ರಗಳಿಗೆ ತಮ್ಮ ಅಭ್ಯರ್ಥಿ ಘೋಷಣೆ ಮಾಡಿದೆ.
ಆರು ಕ್ಷೇತ್ರಗಳನ್ನೂ ಮೈತ್ರಿಕೂಟಕ್ಕೆ ಉಳಿಸಿಕೊಂಡು ಮೇಲುಗೈ ಸಾಧಿಸಲು ಉಭಯ ಪಕ್ಷಗಳು ವರಿಷ್ಠರು ಸಲಹೆ ನೀಡಿದ್ದಾರೆ. ಜೆಡಿಎಸ್ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ನಾಳೆ ಅಂತಿಮಗೊಳಿಸುವ ನಿರೀಕ್ಷೆಯಿದೆ.