ಕರ್ನಾಟಕ

karnataka

ETV Bharat / state

ಪ್ರವಾಸಿಗರೇ ಗಮನಿಸಿ: ಮೂರು ತಿಂಗಳು ಜೋಗ ಜಲಪಾತ ಪ್ರವೇಶ ಬಂದ್ - JOG FALLS ENTRY CLOSE

ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಆದರೆ, ಇದೀಗ ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳು ನಿರ್ಬಂಧ ಹೇರಲಾಗಿದೆ.

jog falls
ಜೋಗ ಜಲಪಾತ (ETV Bharat)

By ETV Bharat Karnataka Team

Published : 5 hours ago

ಶಿವಮೊಗ್ಗ:ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಜಗತ್ ಪ್ರಸಿದ್ಧ ಜೋಗ ಜಲಪಾತದ ವೀಕ್ಷಣೆಗೆ 3 ತಿಂಗಳು ಕಾಲ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

ಇದನ್ನೂ ಓದಿ:ಜೋಗದಲ್ಲಿ ಅಭಿವೃದ್ದಿ ಕಾಮಗಾರಿ ಶೇ 85 ರಷ್ಟು ಪೂರ್ಣ; 2025ರ ನವೆಂಬರ್​ಗೆ ಲೋಕಾರ್ಪಣೆ

₹185 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ: ಜೋಗ‌ ಜಲಪಾತವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು, ಪ್ರವಾಸಿಗರಿಗೆ ಮೂಲಭೂತ ಸೌಕರ್ಯ ಒದಗಿಸಬೇಕೆಂದು ರಾಜ್ಯ ಸರ್ಕಾರವು‌ 185 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ ಕೈಗೆತ್ತಿಕೊಂಡಿದೆ. ಇದರಲ್ಲಿ‌ ಜಲಪಾತ ವೀಕ್ಷಣಾ ಗೋಪುರ, ರೋಪ್ ವೇ, ರೈನ್ ಡ್ಯಾನ್ಸ್, ಗಾರ್ಡನ್, ವಾಣಿಜ್ಯ ಮಳಿಗೆಗಳು, ಉದ್ಯಾನವನ, ಪ್ರವಾಸಿ ಲಾಡ್ಜ್ ಕಾಮಗಾರಿ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ.

ಇದನ್ನೂ ಓದಿ:ಜೋಗ ಜಲಪಾತಕ್ಕೆ ವರ್ಷಕ್ಕೆ ಭೇಟಿ ನೀಡಿದವರೆಷ್ಟು? ಬಂದ ಆದಾಯವೆಷ್ಟು?

ABOUT THE AUTHOR

...view details