ಬೆಂಗಳೂರು:ಇಲ್ಲಿನ ಐಟಿಪಿಎಲ್ ರಸ್ತೆಯಲ್ಲಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಿಧಿಸಿ ಎನ್ಐಎ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್ ಶಾಜಿಬ್ನ ಎನ್ಐಎ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಸೋಮವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇಬ್ಬರು ಆರೋಪಿತರನ್ನು 14 ದಿನ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಎನ್ಐಎ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
ಮಾರ್ಚ್ 1ರಂದು ಐಟಿಪಿಎಲ್ ರಸ್ತೆಯ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರ ಸಹಿತ 9 ಜನ ಗಾಯಗೊಂಡಿದ್ದರು. ಬಳಿಕ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ನೀಡಲಾಗಿತ್ತು. 40 ದಿನಗಳ ಶೋಧ ಕಾರ್ಯಾಚರಣೆ ಹಾಗೂ ಹಲವು ಶಂಕಿತರ ವಿಚಾರಣೆ ಬಳಿಕ ಎನ್ಐಎ ಅಧಿಕಾರಿಗಳು ಇಬ್ಬರು ಪ್ರಮುಖ ಆರೋಪಿಗಳನ್ನು ಕೋಲ್ಕತ್ತಾದಲ್ಲಿ ಬಂಧಿಸಿದ್ದರು.
ಇದನ್ನೂ ಓದಿ:ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಂಧಿತರ ಎನ್ಐಎ ಕಸ್ಟಡಿ ಅವಧಿ ವಿಸ್ತರಣೆ - Rameshwaram Cafe Blast