ಬೆಂಗಳೂರು :ಅರಣ್ಯ ಒತ್ತುವರಿ ತೆರವು ಕಾನೂನು ಪ್ರಕ್ರಿಯೆಯಾಗಿದ್ದು, ದೊಡ್ಡ ಮತ್ತು 2015ರ ನಂತರದ ಅರಣ್ಯ ಒತ್ತುವರಿಯನ್ನು ಮಾತ್ರ ತೆರವು ಮಾಡಿಸಲಾಗುತ್ತಿದೆ. ಮುಗ್ದ ಜನರು ಯಾವುದೇ ವದಂತಿಗಳಿಗೆ ಮರುಳಾಗಬಾರದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಮನವಿ ಮಾಡಿದ್ದಾರೆ. 2015ಕ್ಕೆ ಮೊದಲು ಜೀವನೋಪಾಯಕ್ಕಾಗಿ ಪಟ್ಟಾ ಜಮೀನೂ ಸೇರಿ 3 ಎಕರೆಗಿಂತ ಕಡಿಮೆ ಅರಣ್ಯ ಒತ್ತುವರಿ ಮಾಡಿರುವವರಿಗೆ ತೊಂದರೆ ನೀಡದಂತೆ, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಇತ್ಯರ್ಥ ಆಗದೆ ಬಾಕಿ ಉಳಿದಿದ್ದಲ್ಲಿ ಅಂತಹ ಜಮೀನು, ಮನೆಯನ್ನು ತೆರವು ಮಾಡಿಸದಂತೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ:ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವು ಮಾಡಲ್ಲ : ಸಚಿವ ಈಶ್ವರ್ ಖಂಡ್ರೆ - Clearance of encroachment