ಕಡಬ (ದಕ್ಷಿಣ ಕನ್ನಡ):ಕಡಬ ತಾಲೂಕಿನ ಕುಂತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಬದಿಯಲ್ಲಿ ಜೆಸಿಬಿಯಿಂದ ಕೆಲಸ ಮಾಡುವ ಸಂದರ್ಭದಲ್ಲಿ ಶಾಲಾ ಕಟ್ಟಡದ ಗೋಡೆ ಸಂಪೂರ್ಣವಾಗಿ ಬಿದ್ದಿರುವ ಘಟನೆ ಇಂದು ನಡೆದಿದೆ. ಘಟನೆಯಲ್ಲಿ ನಾಲ್ವರು ಶಾಲಾ ವಿದ್ಯಾರ್ಥಿನಿಯರು ಗಾಯಗೊಂಡಿದ್ದು, ವೈದ್ಯಕೀಯ ಚಿಕಿತ್ಸೆ ನೀಡುವ ಸಲುವಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಟ್ಟಡ ಕುಸಿದ ವೇಳೆ ಶಾಲೆಯಲ್ಲಿನ ಮಕ್ಕಳು ಆಟವಾಡುವ ಸಲುವಾಗಿ ಹೊರಗಡೆ ಹೋಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಿ ಕೂಡಲೇ ಸಮಗ್ರ ವರದಿಯನ್ನು ಸಲ್ಲಿಸುವಂತೆ ಕಡಬ ತಹಶೀಲ್ದಾರರು ಸೂಚನೆ ನೀಡಿದ್ದಾರೆ. ಶಿಥಿಲಗೊಂಡಿರುವ ಕಟ್ಟಡದ ಬಳಿ ಜೆಸಿಬಿಯಿಂದ ಕೆಲಸ ಮಾಡಿರುವುದೇ ಅನಾಹುತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.