ಕಲಬುರಗಿ:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಸಂವಿಧಾನ ರಕ್ಷಣಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕಲಬುರಗಿ ಬಂದ್‌ಗೆ ಇಂದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಳಗ್ಗೆ 6 ಗಂಟೆಯಿಂದಲೇ ಬಂದ್ ಆರಂಭವಾಯಿತು. ಕೇಂದ್ರ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ಪ್ರತಿಭಟನಾಕಾರರು ಟೈರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದವು. ಹೀಗಾಗಿ ವ್ಯಾಪಾರ-ವಹಿವಾಟು ಸ್ಥಗಿತಗೊಂಡಿದೆ. ಬಸ್, ಆಟೋ ಸಂಚಾರ ಕೂಡಾ ಸ್ಥಗಿತಗೊಂಡಿದ್ದು, ಪ್ರಯಾಣಿಕರು ತೊಂದರೆ ಅನುಭವಿಸಿದರು. ವೃದ್ಧರು, ಮಹಿಳೆಯರು ನಡೆದುಕೊಂಡೇ ಸಾಗುತ್ತಿದ್ದುದು ಕಂಡುಬಂತು.