ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಾಧ್ಯಮದವರ ಜೊತೆ ಮಾತನಾಡಿದರು. ಕಲಬುರಗಿ:ಸಿಎಂ ಸಿದ್ದರಾಮಯ್ಯ ಅನುಭವಿ ರಾಜಕಾರಣಿ, ಅವರಿಂದ ರಾಷ್ಟ್ರಪತಿಗಳ ಬಗ್ಗೆ ಅಗೌರವ ಬರುವ ರೀತಿಯ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ ಎಂದು ಕಲಬುರ್ಗಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ಜಿಲ್ಲಾ ಬಿಜೆಪಿ ಅಧ್ಯಕ್ಷರ ಪದಗ್ರಹಣ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಬಾಯಲ್ಲಿ ಇಂತಹ ಪದಗಳು ಬಂದಿರುವುದು ಆಶ್ಚರ್ಯಕರ ಸಂಗತಿ. ರಾಷ್ಟ್ರಪತಿ ಸ್ಥಾನಕ್ಕೆ ಅಗೌರವ ಬರುವಂತೆ ಮುಖ್ಯಮಂತ್ರಿಗಳು ಮಾತನಾಡಿದ್ದು, ಅಕ್ಷಮ್ಯ ಅಪರಾಧ ಎಂದು ವಾಗ್ದಾಳಿ ನಡೆಸಿದರು.
ದಲಿತ ಮಹಿಳೆ ಅಷ್ಟೊಂದು ದೊಡ್ಡ ಸ್ಥಾನದಲ್ಲಿ ಕುಳಿತಿರುವುದು ಸಿಎಂ ಮತ್ತು ಕಾಂಗ್ರೆಸ್ ನಾಯಕರಿಗೆ ಸಹಿಸಲಾಗುತ್ತಿಲ್ಲ. ಆದರೆ ದೇಶದ ಅತ್ಯುನ್ನತ ರಾಷ್ಟ್ರಪತಿ ಹುದ್ದೆಗೆ ದಲಿತ ಮಹಿಳೆಯನ್ನು ಆಯ್ಕೆ ಮಾಡಿದ್ದಕ್ಕೆ ಮನಬಂದಂತೆ ಮಾತನಾಡುತ್ತಿದ್ದಾರೆ. ಪ್ರಧಾನಿ ಮೋದಿ ತಮ್ಮ ಒಂಬತ್ತೂವರೆ ವರ್ಷದ ಆಡಳಿತ ಅವಧಿಯಲ್ಲಿ ಇಂಥ ನಡವಳಿಕೆ ಎಂದೂ ತೋರಿಸಿಲ್ಲ, ಕೇಂದ್ರದ ಕ್ಯಾಬಿನೆಟ್ನಲ್ಲಿ 27 ಜನ ಹಿಂದುಳಿದ ವರ್ಗದವರಿಗೆ ಸ್ಥಾನಮಾನ ನೀಡಿದ್ದಾರೆ.
ಮುಖ್ಯಮಂತ್ರಿಗಳ ಬಾಯಲ್ಲಿ ಅಗೌರವದ ಶಬ್ದ ಆಕಸ್ಮಿಕವಾಗಿ ಬಂದಿರುವಂತೆ ಕಾಣುತ್ತಿಲ್ಲ. ಅವರ ಅಂತರಾಳದ ಮಾತುಗಳು ಭಾವನೆಗಳು ಬಾಯಿಂದ ಮಾತಿನ ರೂಪದಲ್ಲಿ ಹೊರ ಬಿದ್ದಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಲೋಕಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಹೆಚ್ಚು ಸ್ಥಾನ: ನಿಖಿಲ್ ಕುಮಾರಸ್ವಾಮಿ:ಮತ್ತೊಂದು ಕಡೆ,ಪ್ರಧಾನಿ ನರೇಂದ್ರ ಮೋದಿ ತಮ್ಮ ಆಡಳಿತ ಅವಧಿಯಲ್ಲಿ ನೀಡಿದ ಉತ್ತಮ ಆಡಳಿತ, ಜನರಿಗೆ ನೀಡಿದ ಕೊಡುಗೆಯನ್ನು ಮೆಚ್ಚಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಮೋದಿಯವರ ಕೈ ಬಲಪಡಿಸಲು ಬಿಜೆಪಿ - ಜೆಡಿಎಸ್ ಮೈತ್ರಿ:ಕಲಬುರಗಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಜನರಿಗೆ ನೀಡಿರವ ಕೊಡುಗೆ ಹಾಗೂ ಅವರ ಸಾಧನೆಗಳನ್ನು ಪರಾಮರ್ಶಿಸಿದ ಬಳಿಕ ಎಚ್ ಡಿ ದೇವೇಗೌಡರು ಮೋದಿಯವರ ಕೈ ಬಲಪಡಿಸಲು ಈ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ - ಜೆಡಿಎಸ್ ಮೈತ್ರಿಯೊಂದಿಗೆ ಲೋಕಸಭೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಅಭಿಪ್ರಾಯ ತಿಳಿಸಿದರು.
ಇದನ್ನೂ ಓದಿ:ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಎನ್ಡಿಎ ಅಭ್ಯರ್ಥಿ ಎ ಪಿ ರಂಗನಾಥ್ ನಾಮಪತ್ರ ಸಲ್ಲಿಕೆ