ರಾಯಚೂರು:ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಕಲ್ಯಾಣ ಕರ್ನಾಟಕ ಉತ್ಸವ: ರಾಷ್ಟ್ರ ಧ್ವಜಾರೋಹಣ ಮಾಡಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ (ETV Bharat) ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಭಾಗವಹಿಸಿ ತೆರೆದ ವಾಹನದಲ್ಲಿ ಧ್ವಜವಂದನೆ ಸ್ವೀಕರಿಸಿದರು. ಬಳಿಕ ಪೊಲೀಸ್ ಇಲಾಖೆ, ಅಗ್ನಿಶಾಮಕ, ಗೃಹ ರಕ್ಷಕ ದಳ, ಭಾರತ ಸೇವಾ ದಳದ, ಸ್ಕೌಟ್ ಆ್ಯಂಡ್ ಗೈಡ್, ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ನಾಡಿನ ಜನತೆಗೆ ಕಲ್ಯಾಣ ಕರ್ನಾಟಕ ಉತ್ಸವದ ದಿನಾಚರಣೆ ಶುಭಾಶಯ ಕೋರಿ, "ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ" ಎಂದು ತಿಳಿಸಿದರು.
ಸಚಿವ ಎನ್. ಎಸ್. ಬೋಸರಾಜು, ಶಾಸಕರಾದ ಬಸವನಗೌಡ ದದ್ದಲ್, ಎ.ವಸಂತ ಕುಮಾರ್, ಸಂಸದ ಜಿ.ಕುಮಾರ್ ನಾಯಕ, ಆರ್‌ಡಿಎ ಅಧ್ಯಕ್ಷ ರಾಮಸ್ವಾಮಿ, ನಗರಸಭೆ ಅಧ್ಯಕ್ಷೆ ನರಸಮ್ಮ ಮಾಡಗಿರಿ, ಉಪಾಧ್ಯಕ್ಷ ಸಾಜೀದ್ ಸಮೀರ್, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯಿತಿ ಸಿಇಒ ತುಕಾರಾಂ ರಾಹುಲ್ ಪಾಂಡ್ವೆ ಸೇರಿದಂತೆ ಗಣ್ಯರು, ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು, ಭಾಗವಹಿಸಿದ್ದರು.
ಇದನ್ನೂ ಓದಿ:ಮೈಸೂರು ದಸರಾ: ಕುಶಾಲತೋಪು ಸಿಡಿಸುವ ಫಿರಂಗಿಗಳ ಡ್ರೈ ರನ್ ಆರಂಭ - Cannons Dry Run